ಒಂದು ರಾಷ್ಟ್ರ, ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದಲ್ಲಿ ಸಮಿತಿ

Date:

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಸಾಧ್ಯತೆಗಳನ್ನು ಕಂಡುಕೊಳ್ಳಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ಕೇಂದ್ರ ಸರ್ಕಾರ ರಚಿಸಿದೆ.

ಕೇಂದ್ರ ಸರ್ಕಾರವು ಸೆ.18 ರಿಂದ 22ರವರೆಗೆ ಐದು ದಿನಗಳ ವಿಶೇಷ ಸಂಸತ್ ಅಧಿವೇಶನ ಕರೆದ ಒಂದು ದಿನದ ನಂತರ ಈ ಸಮಿತಿ ರಚಿಸಲಾಗಿದೆ.

ಸಮಿತಿಗೆ ಉಳಿದ ಸದಸ್ಯರನ್ನು ನೇಮಕ ಮಾಡಿದ ಬಳಿಕ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವುದರ ಸಾಧಕ- ಬಾಧಕಗಳ ಕುರಿತು ಅಧ್ಯಯನ, ಸಮಾಲೋಚನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶಾದ್ಯಂತ ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ‘ಒಂದು ದೇಶ, ಒಂದು ಚುನಾವಣೆ’ ಯೋಜನೆಯ ಉದ್ದೇಶವಾಗಿದೆ. ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಜನರು ಒಂದೇ ಬಾರಿಗೆ ಮತ ಚಲಾಯಿಸುವಂತಾದರೆ ಸಮಯ ಹಾಗೂ ಭಾರಿ ಹಣದ ಉಳಿತಾಯವಾಗಲಿದೆ ಎನ್ನುವುದು ಕೇಂದ್ರ ಸರ್ಕಾರದ ವಾದವಾಗಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತ್‌ ತಿಮ್ಮಯ್ಯ ವಜಾ  

ಇದೇ ವರ್ಷ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮುಂದಿನ ವರ್ಷ ಮೇ ಅಥವಾ ಜೂನ್ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ‘ಒಂದು ರಾಷ್ಟ್ರ ಒಂದು ಚುನಾವಣೆ’ಯ ಪ್ರಬಲ ಪ್ರತಿಪಾದಕರಾಗಿದ್ದಾರೆ. ನಿರಂತರ ಚುನಾವಣಾ ಚಕ್ರದಿಂದ ಉಂಟಾಗುವ ಆರ್ಥಿಕ ಹೊರೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಅಡಚಣೆಯಾಗಿದೆ ಎಂಬುದು ಪ್ರಧಾನಿಯವರು ಉಲ್ಲೇಖವಾಗಿದೆ.

ಈ ಸುದ್ದಿ ಓದಿದ್ದೀರಾ? ಲಖನೌ | ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 9 ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರವು ಸಂಸತ್‌ನ ವಿಶೇಷ ಅಧಿವೇಶನ ಕರೆದಿರುವುದು ಇದು ಮೊದಲ ಬಾರಿಯಾಗಿದೆ. 2017ರ ಜೂನ್ 30ರ ಮಧ್ಯರಾತ್ರಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿ ಉದ್ದೇಶದಿಂದ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ವಿಶೇಷ ಜಂಟಿ ಕಲಾಪ ನಡೆಸಲಾಗಿತ್ತು. ಆದರೆ ಈ ಬಾರಿ ಐದು ದಿನಗಳ ಕಾಲ ಸಂಸತ್‌ನ ಉಭಯ ಸದನಗಳಲ್ಲಿ ಪೂರ್ಣ ಪ್ರಮಾಣದ ಪ್ರತ್ಯೇಕ ಕಲಾಪಗಳು ನಡೆಯಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...