ಕೇಂದ್ರ ಫೆ.14ರವರೆಗೆ ಕಾಯಬಾರದು, ರೈತರೊಂದಿಗೆ ಆದಷ್ಟು ಬೇಗ ಮಾತನಾಡಬೇಕು: ಪಂಜಾಬ್ ಸಚಿವ

Date:

ಕೇಂದ್ರ ಸರ್ಕಾರವು ಉತ್ತಮ ಉದ್ದೇಶವನ್ನು ಹೊಂದಿದ್ದರೆ ಫೆಬ್ರವರಿ 14ರವರೆಗೆ ಕಾಯುವ ಬದಲಾಗಿ ಪ್ರತಿಭಟನಾ ನಿರತ ರೈತರೊಂದಿಗೆ ಆದಷ್ಟು ಬೇಗ ಸಭೆ ನಡೆಸಬೇಕು ಎಂದು ಪಂಜಾಬ್ ಕೃಷಿ ಸಚಿವ ಗುರ್ಮೀತ್ ಸಿಂಗ್ ಖುಡಿಯನ್ ಭಾನುವಾರ ಹೇಳಿದ್ದಾರೆ.

ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಸುಮಾರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸುಮಾರು 50ಕ್ಕೂ ಅಧಿಕ ದಿನಗಳಿಂದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇತ್ತೀಚೆಗೆ ಅವರೊಂದಿಗೆ 111 ರೈತರು ಕೂಡಾ ಉಪವಾಸ ಆರಂಭಿಸಿದ್ದಾರೆ.

ಇದನ್ನು ಓದಿದ್ದೀರಾ? ದಲ್ಲೇವಾಲ್ ಉಪವಾಸ – ದೆಹಲಿ ಚಲೋಗೆ ಮಂಡಿಯೂರಿದ ಪ್ರಧಾನಿ ಮೋದಿ; ರೈತರಿಗೆ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ದಲ್ಲೇವಾಲ್ ಸ್ಥಿತಿ ಚಿಂತಾಜನಕವಾಗಿದೆ. ಇತರೆ ರೈತರ ಆರೋಗ್ಯವೂ ಕೂಡಾ ಹದಗೆಡುತ್ತಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ರೈತರ ಜೀವಕ್ಕೆ ಬೆಲೆಯೇ ಇಲ್ಲದಂತೆ ವರ್ತಿಸುತ್ತಿದೆ. ವಿಪಕ್ಷಗಳು ಮತ್ತು ರೈತರ ಒತ್ತಡದ ಬಳಿಕ ಕೊನೆಗೂ ಮಾತುಕತೆಗೆ ಒಪ್ಪಿಕೊಂಡಿದೆ. ಆದರೆ ಫೆಬ್ರವರಿ 14ರಂದು ಮಾತುಕತೆಗೆ ದಿನಾಂಕ ನಿಗದಿ ಮಾಡಿದೆ. ಪ್ರತಿಭಟನಾನಿರತ ರೈತರ ಸ್ಥಿತಿ ಶೋಚನೀಯವಾಗಿದ್ದರೂ ತಕ್ಷಣ ಸ್ಪಂದಿಸದೆ ಸುಮಾರು ಒಂದು ತಿಂಗಳ ನಂತರ ಮಾತುಕತೆಗೆ ಆಹ್ವಾನಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕೇಂದ್ರವು ಫೆಬ್ರವರಿ 14ರಂದು ಚಂಡೀಗಢದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ವನ್ನು ಮಾತುಕತೆಗೆ ಆಹ್ವಾನಿಸಿದೆ.

ಶನಿವಾರ ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಿಯ ರಂಜನ್ ನೇತೃತ್ವದ ಉನ್ನತ ಮಟ್ಟದ ಕೇಂದ್ರ ನಿಯೋಗವು ಖಾನೌರಿ ಗಡಿಗೆ ಭೇಟಿ ನೀಡಿದ್ದು, ದಲ್ಲೇವಾಲ್ ಮತ್ತು ಇತರೆ ನಾಯಕರುಗಳನ್ನು ಫೆಬ್ರವರಿ 14ರಂದು ಮಾತುಕತೆಗೆ ಆಹ್ವಾನಿಸಿದರು. ಒಂದು ತಿಂಗಳ ನಂತರ ದಿನಾಂಕ ನಿಗದಿಪಡಿಸಿರುವುದಕ್ಕೆ ಪಂಜಾವ್ ಸಚಿವರೂ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಎಂಎಸ್‌ಪಿ | 43ನೇ ದಿನಕ್ಕೆ ಕಾಲಿಟ್ಟ ದಲ್ಲೇವಾಲ್ ಉಪವಾಸ; ರೈತರ ಬಲಿಗೆ ಕಾಯುತ್ತಿದೆಯೇ ಕೇಂದ್ರ?

“ನವೆಂಬರ್ 26 ರಿಂದ ಆಮರಣಾಂತ ಉಪವಾಸ ನಡೆಸುತ್ತಿರುವ ದಲ್ಲೆವಾಲ್ ಅವರ ಆರೋಗ್ಯ ಚಿಂತಾಜನಕವಾಗಿದೆ. ಕೇಂದ್ರ ಸಚಿವಾಲಯವು ಪ್ರತಿಭಟನಾ ನಿರತ ರೈತರೊಂದಿಗೆ ಆದಷ್ಟು ಬೇಗ ಸಭೆ ನಡೆಸಬೇಕು. ಕೇಂದ್ರವು ಉತ್ತಮ ಉದ್ದೇಶದಿಂದ ಸಭೆ ನಡೆಸುವುದಾದರೆ ಒಂದು ಅಥವಾ ಎರಡು ದಿನಗಳಲ್ಲಿ ಮಾತುಕತೆ ನಡೆಸಬೇಕು” ಎಂದು ಹೇಳಿದ್ದಾರೆ.

ಇನ್ನು ಈ ಸಭೆಗೆ ಒಪ್ಪಿದ ಬಳಿಕ ದಲ್ಲೇವಾಲ್ ವೈದ್ಯಕೀಯ ನೆರವು ಪಡೆಯಲು ಒಪ್ಪಿಕೊಂಡಿದ್ದಾರೆ. ಆದರೆ ಆಹಾರ ಇನ್ನೂ ಸೇವಿಸಿಲ್ಲ ಎಂದು ಹೇಳಲಾಗಿದೆ. ನವೆಂಬರ್ 26ರಂದು ಆಮರಣಾಂತ ಉಪವಾಸ ಕುಳಿತಾಗಿನಿಂದ 70 ವರ್ಷದ ದಲ್ಲೇವಾಲ್ ಯಾವುದೇ ವೈದ್ಯಕೀಯ ನೆರವು ಪಡೆಯಲು ನಿರಾಕರಿಸಿದ್ದರು. ರೈತರೊಂದಿಗೆ ಮಾತುಕತೆಗೆ ದಿನಾಂಕ ನಿಗದಿಯಾದ ಬಳಿಕ ಔಷಧಿಯನ್ನು ಡ್ರಿಪ್ ಮೂಲಕ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...