ಮನರೇಗಾ ರದ್ದು; ಕೃಷಿ ಕಾನೂನು ಜಾರಿ ಮೂಲಕ ಮಾಡಿದ ತಪ್ಪನ್ನು ಪುನರಾವರ್ತಿಸಲು ಕೇಂದ್ರ ಯತ್ನಿಸುತ್ತಿದೆ: ರಾಹುಲ್ ಗಾಂಧಿ

Date:

ಮನರೇಗಾ ಯೋಜನೆಯನ್ನು ರದ್ದು ಮಾಡಿ, ವಿಬಿ-ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಮವನ್ನು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಗುರುವಾರ ಟೀಕಿಸಿದ್ದಾರೆ. “ಕೃಷಿ ಕಾನೂನು ಜಾರಿ ಮೂಲಕ ಮಾಡಿದ ತಪ್ಪನ್ನು ಈಗ ಕೇಂದ್ರ ಸರ್ಕಾರ ಮನರೇಗಾ ರದ್ಧು ಮೂಲಕ ಪುನರಾವರ್ತಿಸಲು ಯತ್ನಿಸುತ್ತಿದೆ” ಎಂದು ರಾಹುಲ್ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಮನರೇಗಾ ಕಾರ್ಮಿಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಶಾಸನದ ವಿರುದ್ಧ ಕಾರ್ಮಿಕರು ಮತ್ತು ಬಡ ನಾಗರಿಕರು ಒಗ್ಗೂಡುವಂತೆ ಒತ್ತಾಯಿಸಿದರು. “ಪಂಚಾಯತಿ ರಾಜ್ ವ್ಯವಸ್ಥೆಯ ಮೂಲಕ ಬಡವರಿಗೆ ಉದ್ಯೋಗದ ಹಕ್ಕನ್ನು ಒದಗಿಸಲು ಮನರೇಗಾ ಅನ್ನು ವಿನ್ಯಾಸಗೊಳಿಸಲಾಗಿದೆ. ಬಡವರನ್ನು ಸಬಲೀಕರಣಗೊಳಿಸುವುದೇ ಇದರ ಉದ್ದೇಶವಾಗಿತ್ತು. ಆದರೆ ಬಿಜೆಪಿ ಆ ಪರಿಕಲ್ಪನೆಯನ್ನು ಅಂತ್ಯ ಮಾಡಲು ಬಯಸುತ್ತದೆ” ಎಂದು ದೂರಿದ್ದಾರೆ.

ಇದನ್ನು ಓದಿದ್ದೀರಾ? ಗದಗ | ಗುಳೆ ತಪ್ಪಿಸಲು ಮನರೇಗಾ ಯೋಜನೆ ನೆರವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯನ್ನು ನೆನಪಿಸಿಕೊಂಡ ರಾಹುಲ್ ಗಾಂಧಿ, “ನಾವೆಲ್ಲರೂ ಒಗ್ಗೂಡಿ ಆ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ್ದೇವೆ. ಸರ್ಕಾರವು ಈಗ ಕಾರ್ಮಿಕರ ವಿಷಯದಲ್ಲೂ ಅದೇ ರೀತಿ ತಪ್ಪನ್ನು ಪುನರಾವರ್ತಿಸಲು ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

ಇನ್ನು ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಮನರೇಗಾ ಯೋಜನೆಯನ್ನು ಮರುಸ್ಥಾಪಿಸಬೇಕು, ಪಂಚಾಯತ್‌ಗಳ ಅಧಿಕಾರವನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಜನವರಿ 10ರಿಂದ ‘ಮನರೇಗಾ ಬಚಾವೊ ಸಂಗ್ರಾಮ’ ಎಂಬ 45 ದಿನಗಳ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...