ಕೇಂದ್ರದ ಕದನ ವಿರಾಮ ನಿರ್ಧಾರ ನಿರಾಸೆ ಮೂಡಿಸಿದೆ: ಸಚಿವ ಪ್ರಿಯಾಂಕ್ ಖರ್ಗೆ

Date:

ಭಯೋತ್ಪಾದಕ ತಾಣಗಳನ್ನು ನಮ್ಮ ಸೈನಿಕರು ಧ್ವಂಸ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕದನ ವಿರಾಮದ ನಿರ್ಧಾರದಿಂದ ಸೇನೆಗೆ ಹಾಗೂ ಭಾರತೀಯ ಸಾಮಾನ್ಯ‌ ನಾಗರಿಕರಿಗೆ ನಿರಾಸೆ ತಂದಿದೆ ಎಂದು ಗಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರಗಿಯಲ್ಲಿ ಸೋಮವಾರ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿ, “ಪಾಕಿಸ್ತಾನ ನಂಬಿಕೆಗೆ ಅರ್ಹ ರಾಷ್ಟ್ರವಲ್ಲ. ನಮ್ಮ ನಾಗರಿಕರ ಮೇಲೆ ದಾಳಿ ಮಾಡಿದ ಭಯೋತ್ಪಾದಕರ ನೆಲೆಗಳ ಮೇಲೆ ಸೈನಿಕರು ದಾಳಿ ಮಾಡಿ‌ ನಾಶ ಮಾಡಿದ್ದಾರೆ. ಆದರೆ, ಕದನ ವಿರಾಮ ಘೋಷಿಸಲಾಗಿದೆ. ಅದನ್ನು ಯಾರು ಘೋಷಿಸಬೇಕು.? ಯಾವ ಮಾನದಂಡಗಳ ಅಡಿಯಲ್ಲಿ ಮಾಡಲಾಗಿದೆ? ಕದನ ವಿರಾಮ ಉಲ್ಲಂಘನೆ ಮಾಡಿದರೆ ಯಾವ ಕ್ರಮ ಕೈಗೊಳ್ಳಬೇಕು? ಎನ್ನುವ ಬಗ್ಗೆ ಸರ್ಕಾರ ಅಧಿವೇಶನ ಕರೆದು ರಾಷ್ಟ್ರದ ಜನರಿಗೆ ವಾಸ್ತವ ತಿಳಿಸಲಿ” ಎಂದು ಒತ್ತಾಯಿಸಿದರು.

“ಕಾಶ್ಮೀರ ವಿಚಾರ ದ್ವೀಪಕ್ಷೀಯ ವಿಷಯವಾಗಿದ್ದು ಪಾಕಿಸ್ತಾನ ಹಾಗೂ ಭಾರತ ನಡುವಿನ ವಿಚಾರವನ್ನು ಈಗ ಅಮೇರಿಕಾ ಮಧ್ಯೆ ಪ್ರವೇಶಿಸುವ ಮೂಲಕ ಅಂತರಾಷ್ಟ್ರೀಯ ವಿಚಾರವನ್ನಾಗಿ ಮಾಡಲಾಗಿದೆ. ಕದನ ವಿರಾಮ ಘೋಷಣೆ ಮಾಡಲು ಟ್ರಂಪ್ ಯಾರು? ಅವರ ಟ್ವಿಟ್ ನಲ್ಲಿರುವ ಅಂಶಗಳನ್ನು ಗಮನಿಸಿದ್ದೀರಾ? ಕಾಮನ್ ಸೆನ್ಸ್ ಎನ್ನುವ ಪದ ಬಳಸಿ, ಭಾರತಕ್ಕೆ ಬುದ್ದಿ ಹೇಳಿರುವ ರೀತಿಯಲ್ಲಿ ಟ್ವಿಟ್ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ, ವಿದೇಶಾಂಗ ಸಚಿವರು ಹಾಗೂ ರಾಷ್ಟ್ರೀಯ ಭದ್ರತೆ ಸಲಹೆಗಾರರು ಕದನ ವಿರಾಮದ ಬಗ್ಗೆ ಯಾಕೆ ಜನರಿಗೆ ವಾಸ್ತವ ತಿಳಿಸುತ್ತಿಲ್ಲ” ಎಂದು ಅಸಮಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದೇಶಾಂಗ ನೀತಿಗಳು ಬಲಿಷ್ಠಗೊಳ್ಳಬೇಕಾದರೆ ಪ್ರಧಾನಿ ಗಳು ಹೊರದೇಶದ ಪ್ರಧಾನ ಮಂತ್ರಿಗಳನ್ನು ಅಪ್ಪಿಕೊಂಡರೆ‌ ಸಾಲದು, ಅವರೊಂದಿಗೆ ಮಾತುಕತೆ ನಡೆಸಬೇಕಾಗುತ್ತದೆ. ಭಯೋತ್ಪಾದಕ ಕೃತ್ಯವನ್ನು ಅಮೇರಿಕಾ ಖಂಡಿಸಿಲ್ಲ. ಚೀನಾ ಹಾಗೂ ಟರ್ಕಿ ಪಾಕಿಸ್ತಾನಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಈ ನಡುವೆ ಅಂತರಾಷ್ಟ್ರೀಯ ವಿತ್ತೀಯ ನಿಧಿ ( IMF) ಪಾಕಿಸ್ತಾನಕ್ಕೆ ಸಾಲ ಘೋಷಿಸಿದೆ ಎಂದರೆ ಭಾರತ ಸರ್ಕಾರ ಭಯೋತ್ಪಾದನೆಗೆ ಬೆಂಬಲವಾಗಿರುವ ಪಾಕಿಸ್ತಾನಕ್ಕೆ ಸಾಲ‌ ನೀಡದಂತೆ ಮನವರಿಕೆ ಮಾಡಲು‌ ವಿಫಲವಾಗಿದೆ. ಇದು ವಿದೇಶಾಂಗ ನೀತಿಗಳು ಎಡವುತ್ತಿವೆ ಎನ್ನುವ ಅಭಿಪ್ರಾಯ ಮೂಡುತ್ತಿದೆ” ಎಂದರು.

“ಕಾಂಗ್ರೆಸ್‌ ಪಕ್ಷದ ದೇಶದ ಹಿತಾಸಕ್ತಿ‌ ಕಾಪಾಡಲು ಕೇಂದ್ರ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ. ಪಹಲ್ಗಾಮ್ ದಾಳಿಯ ಭಯೋತ್ಪದಾಕರು ಏನಾದರು? ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ ಸಚಿವರು, ಭಯೋತ್ಪಾದಕ ದಾಳಿ, ಹಾಗೂ ಕದನ ವಿರಾಮದ ಬಗ್ಗೆ ಪ್ರಧಾನಿ ಸಂಸತ್ತಿನ ಅಧಿವೇಶನ ಕರೆದು‌ ದೇಶದ ನಾಗರಿಕರಿಗೆ ತಿಳಿಸಲಿ” ಎಂದು ಒತ್ತಾಯಿಸಿದರು.

ಮಾಧ್ಯಮಗಳಲ್ಲಿ ಯುದ್ಧದ ರಂಜನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಖರ್ಗೆ, “ದೇಶದ ಹಿತಾಸಕ್ತಿ ಹಾಗೂ ವಾಸ್ತವಾಂಶಗಳಿಗಿಂತ ವ್ಯಕ್ತಿಯ ವೈಭವೀಕರಣವಾಗುತ್ತಿದೆ. ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಪ್ರಸಾರ ವಾಗುತ್ತಿದೆ. ಪಾನೆಲ್ ಚರ್ಚೆಯಲ್ಲಿ ಭಾಗವಹಿಸುವವರು ಹಾಗೂ ಬಿಜೆಪಿಯ ಬಾಡಿಗೆ ಭಾಷಣಕಾರರು ತಪ್ಪು ಮಾಹಿತಿಯನ್ನೇ ಹೇಳುತ್ತಿದ್ದಾರೆ. ಕರಾಚಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ, ಪಾಕಿಸ್ತಾನ ನಾಲ್ಕು ಭಾಗವಾಗುತ್ತದೆ ಎಂದು ಹೇಳಿದ್ದರು” ಎಂದರು.

ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಯ ಫಲಿತಾಂಶ ಕುಸಿಯುತ್ತಿರುವುದಕ್ಕೆ ತಾವು ಹೊಣೆಗಾರರಾಗುವುದಾಗಿ ಹೇಳಿದ ಸಚಿವರು, “ಶೈಕ್ಷಣಿಕ ಗುಣಮಟ್ಟ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ನೀಲ ನಕ್ಷೆ ತಯಾರಿಸಲಾಗುತ್ತಿದ್ದು ಬೆಂಗಳೂರು ಮೂಲದ ಎರಡು ಎನ್ ಜಿ ಓ ಗಳೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಇದರ ಫಲಿತಾಂಶ ಮುಂದಿನ ಮಾರ್ಚ್ ತಿಂಗಳಲ್ಲಿ ಗೊತ್ತಾಗಲಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...