ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಬಂಧನ: ನೂತನ ಸಿಎಂ ಆಗಿ ಚಂಪಯ್ ಸೊರೇನ್ ಅಚ್ಚರಿಯ ಆಯ್ಕೆ

Date:

ದಿಡೀರ್ ರಾಜಕೀಯ ಬೆಳವಣಿಗೆಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರೇನ್ ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಅಚ್ಚರಿ ಎಂಬಂತೆ ಸಂಪುಟದಲ್ಲಿ ಹಿರಿಯ ಸಚಿವರಾಗಿದ್ದ ಚಂಪಯ್ ಸೊರೇನ್ ಅವರನ್ನು ಆಡಳಿತಾರೂಢ ಜೆಎಂಎಂ ಪಕ್ಷದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆರಿಸಲಾಗಿದೆ.

ಚಂಪಯ್ ಸೊರೇನ್ ಅವರು ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಇಂದು(ಫೆ. 1) ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಇದಕ್ಕೂ ಮೊದಲು ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಸೊರೇನ್ ಅವರು ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಅವರ ಬದಲಿಗೆ ಚಂಪಯ್ ಸೊರೇನ್ ಅವರನ್ನು ಆಯ್ಕೆ ಮಾಡಲಾಗಿದೆ.

ಭೂ ಹಗರಣ ಹಾಗೂ ಅದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಬಂಧಿಸಿದ್ದಾರೆ. ಆ ಹಿನ್ನೆಲೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಜ. 31ರ ಸಂಜೆ ರಾಜ್ಯಪಾಲರನ್ನು ಭೇಟಿಯಾದ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಹಗರಣ?
ಜಾರ್ಖಂಡ್‌ ರಾಜಧಾನಿ ರಾಂಚಿಯಲ್ಲಿ ಸೇನೆಗೆ ಸೇರಿದ ನೂರಾರು ಕೋಟಿ ರು. ಬೆಲೆ ಬಾಳುವ ಸುಮಾರು 7 ಎಕರೆ ಭೂಮಿಯನ್ನು ಅಕ್ರಮ ದಾಖಲೆ ಸೃಷ್ಟಿಸುವ ಮೂಲಕ ಕಬಳಿಸಿದ ಆರೋಪ ಹೇಮಂತ್ ಸೊರೇನ್‌ ಮೇಲಿದೆ. ಈ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿಗಳು ಸೇರಿದಂತೆ 14 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಈ ಭೂಮಿ ಗೋಲ್‌ಮಾಲ್‌ ಪ್ರಕರಣ ಸಂಬಂಧ ಅಕ್ರಮ ಹಣದ ವಹಿವಾಟು ತನಿಖೆಯನ್ನು ಇ.ಡಿ. ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...