ಭಾರತದೊಂದಿಗೆ ಯುದ್ಧದ ಸಾಧ್ಯತೆಯಿರುವುದು ನಿಜ: ಪಾಕಿಸ್ತಾನ ರಕ್ಷಣಾ ಸಚಿವ

Date:

“ಭಾರತದೊಂದಿಗೆ ಯುದ್ಧ ನಡೆಯುವ ಸಾಧ್ಯತೆಯಿರುವುದು ನಿಜ” ಎಂದು ಹೇಳಿಕೊಂಡಿರುವ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸೀಫ್, “ಭವಿಷ್ಯದಲ್ಲಿ ಯಾವುದೇ ಶಸ್ತ್ರಾಸ್ತ್ರ ಸಂಘರ್ಷ ನಡೆದರೆ ಪಾಕಿಸ್ತಾನವೇ ಮೇಲುಗೈ ಸಾಧಿಸಲಿದೆ” ಎಂದಿದ್ದಾರೆ.

ಮಂಗಳವಾರ ಸಮಾ ಟಿವಿಯಲ್ಲಿ ನಡೆದ ಸಂದರ್ಶನದಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸುತ್ತಾ ಪಾಕ್ ರಕ್ಷಣಾ ಸಚಿವರು, “ಭಾರತದೊಂದಿಗೆ ಮತ್ತೆ ಸಂಘರ್ಷದ ಬೆದರಿಕೆಯಿದೆ, ಆದ್ದರಿಂದ ಪಾಕಿಸ್ತಾನ ಎಲ್ಲಾ ಪರಿಸ್ಥಿತಿಯ ಅವಲೋಕನ ನಡೆಸುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರತ, ಪಾಕಿಸ್ತಾನ ನಾಯಕರು ಈಗ ಜೊತೆಯಾಗಿ ಭೋಜನಕ್ಕೆ ಹೋಗಬಹುದು: ಡೊನಾಲ್ಡ್ ಟ್ರಂಪ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಈ ವಿಚಾರದಲ್ಲಿ ಉತ್ಪ್ರೇಕ್ಷೆ ಮಾಡಲು ಬಯಸಲ್ಲ. ಆದರೆ ಅಪಾಯ ಇರುವುದು ನಿಜ, ಅದನ್ನು ನಾನು ಅಲ್ಲಗಳೆಯಲಾರೆ. ಯುದ್ಧವೇ ನಡೆಯುವುದಾದರೆ ಅದು ದೇವರ ಇಚ್ಛೆ. ನಾವು ಈ ಹಿಂದಿಗಿಂತ ಉತ್ತಮ ಯಶಸ್ಸನ್ನು ಕಾಣುತ್ತೇವೆ” ಎಂದು ಹೇಳಿಕೊಂಡಿದ್ದಾರೆ.

ಈ ಸಂದರ್ಭದಲ್ಲೇ, “ಆರು ತಿಂಗಳಿಗೂ ಮುನ್ನ ನಮಗಿದ್ದ ಬೆಂಬಲಕ್ಕಿಂತ ಅಧಿಕ ಬೆಂಬಲ ಈಗ ಇದೆ. ಮೇ ಸಂಘರ್ಷದ ಬಳಿಕ ಭಾರತ ಹಲವು ದೇಶಗಳ ಬೆಂಬಲವನ್ನು ಕಳೆದುಕೊಂಡಿದೆ” ಎಂದು ಹೇಳಿರುವ ಪಾಕ್ ರಕ್ಷಣಾ ಸಚಿವ ಯಾವುದೇ ದೇಶದ ಹೆಸರನ್ನು ಉಲ್ಲೇಖಿಸಿಲ್ಲ.

“ವಿಶ್ವದ ನಕ್ಷೆಯಲ್ಲಿ ಉಳಿಯಬೇಕಾದರೆ ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು” ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಕೆ ನೀಡಿದ ಪಾಕಿಸ್ತಾನ ರಕ್ಷಣಾ ಸಚಿವರು ಯುದ್ಧ ಸಾಧ್ಯತೆಯ ಹೇಳಿಕೆಯನ್ನು ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...