ಚಂದ್ರಶೇಖರ್‌ ಆತ್ಮಹತ್ಯೆ | ವಾಲ್ಮೀಕಿ ನಿಗಮದ ಮೂವರು ಉನ್ನತ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌, ಆರೋಪಿಗಳು ನಾಪತ್ತೆ

Date:

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ (48) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರು ಉನ್ನತ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಚಂದ್ರಶೇಖರ್‌ ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ ಬಳಿಯಿರುವ ತಮ್ಮ ನಿವಾಸದಲ್ಲಿ ಭಾನುವಾರ ಸಂಜೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಡೆತ್‌ ನೋಟ್‌ನಲ್ಲಿ ತಮ್ಮ ಸಾವಿಗೆ ಕಾರಣ ತಿಳಿಸಿ ಮೂವರು ಉನ್ನತ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ಈ ಆಧಾರದ ಮೇಲೆ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

“ಈ ಮೂವರು ಅಧಿಕಾರಿಗಳು ವಿವಿಧ ಠೇವಣಿಗಳ ಮೂಲಕ ವೈಯಕ್ತಿಕ ಲಾಭಕ್ಕಾಗಿ ಸುಮಾರು 87 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿದ್ದು, ಮಾತ್ರವಲ್ಲದೇ ತನಗೆ ಕಿರುಕುಳ ನೀಡಿದ್ದಾರೆ. ಪಾಲಿಕೆಯ ಪ್ರಾಥಮಿಕ ಖಾತೆಯಿಂದ ಲೆಕ್ಕಕ್ಕೆ ಸಿಗದ ಹಣವನ್ನು ಬೇರೆಡೆಗೆ ತಿರುಗಿಸಲು ಸಮಾನಾಂತರ ಬ್ಯಾಂಕ್ ಖಾತೆ ತೆರೆಯುವಂತೆ ಹಿರಿಯ ಅಧಿಕಾರಿಗಳು ಒತ್ತಾಯಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಮೊಗ್ಗದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ಎಂದು ಮೊದಲು ದಾಖಲಾಗಿತ್ತು. ಆದರೆ ನಂತರ ಡೆತ್ ನೋಟ್ ಸಿಕ್ಕಾಗ ಮೂವರು ಸರ್ಕಾರಿ ಅಧಿಕಾರಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ” ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರೋಪಿಗಳು ನಾಪತ್ತೆ

ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಸರ್ಕಾರಿ ನೌಕರರು ಸದ್ಯ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸಚಿವ ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ ಕೂಡಲೇ ಸಚಿವ ನಾಗೇಂದ್ರ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್‌, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಚಿವ ನಾಗೇಂದ್ರ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಸಚಿವರ ಸ್ಪಷ್ಟನೆ ಏನು

ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಪ್ರತಿಕ್ರಿಯಿಸಿದ್ದು, ”ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ಕೆಎಂವಿಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ, ದುರ್ಗಣ್ಣ ಮತ್ತು ಸುಚಿಸ್ಮಿತಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಮತ್ತು ಅವರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ನಾವು ಅವರನ್ನು ಬಿಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗಂಭೀರವಾಗಿ ಪರಿಗಣಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಒಂದು ಬ್ಯಾಂಕ್ ನಿಂದ ಇನ್ನೊಂದು ಬ್ಯಾಂಕ್ ಗೆ ಹಣ ವರ್ಗಾವಣೆ ಮಾಡುವಾಗ ಈ ವಂಚನೆ ನಡೆದಿದೆ. ಸುಮಾರು 87 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ. ಈವರೆಗೆ 28 ಕೋಟಿ ರೂ.ಗಳನ್ನು ರಿಕವರಿ ಮಾಡಲಾಗಿದೆ. ನಾವು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರು ಮತ್ತು ನಿರ್ದೇಶಕರೊಂದಿಗೆ ಮಾತನಾಡಿದ್ದೇವೆ. ಉಳಿದ 50 ಕೋಟಿ ರೂಪಾಯಿಗಳನ್ನು ಮರುಪಾವತಿಸುವುದಾಗಿ ಹೇಳಿದ್ದಾರೆ” ಎಂದು ಸಚಿವರು ವಿವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...