ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ

Date:

ರಾಜ್ಯದ ಹೆಸರಾಂತ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ, ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರ ಜೊತೆಗೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ ಟಿ ನಾಗಣ್ಣ ಮತ್ತು ಅರ್ಜುನ್ ಪರಪ್ಪ ಹಲಗಿಗೌಡರ್ ಅವರನ್ನು ನೇಮಿಸಲಾಗಿದೆ.

ಆಮ್‌ ಆದ್ಮಿ ಪಕ್ಷದ ಈ ಹಿಂದಿನ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರನ್ನು ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಚಂದ್ರು ಅವರು 1985 ರಿಂದ 1989ರ ಅವಧಿಯಲ್ಲಿ ಗೌರಿಬಿದನೂರು ಶಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ. 1998ರಿಂದ 2010ರ ಅವಧಿಗೆ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. 2008ರಿಂದ 2014ರ ಅವಧಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ನಟ, ರಂಗಭೂಮಿ ಕಲಾವಿದರಾಗಿ ಸಾಕಷ್ಟು ಹೆಸರು ಮಾಡಿದ್ದ ಮುಖ್ಯಮಂತ್ರಿ ಚಂದ್ರು, ಅನೇಕ ಧಾರವಾಹಿಗಳಲ್ಲಿಯೂ ಅಭಿನಯಿಸುವ ಮೂಲಕ ಮನೆಮಾತಾದವರು.

AAP 4

ಈ ಕುರಿತು ಟ್ವೀಟ್​ ಮಾಡಿರುವ ಪೃಥ್ವಿ ರೆಡ್ಡಿ, “ನಮ್ಮ ನೂತನ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕರ್ನಾಟಕದ ಜನರ ಪ್ರೀತಿ ಗಳಿಸಿದ ನಿಸ್ವಾರ್ಥ, ಬದ್ಧತೆಯ ವ್ಯಕ್ತಿ. ಆಮ್ ಆದ್ಮಿ ಪಕ್ಷ ಮತ್ತು ನಮ್ಮ ರಾಜ್ಯದ ಜನತೆಗೆ ಅವರು ಬಹುದೊಡ್ಡ ಆಸ್ತಿ” ಎಂದಿದ್ದಾರೆ. ಇದರ ಜೊತೆಗೆ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಬಿ.ಟಿ.ನಾಗಣ್ಣ ಮತ್ತು ಅರ್ಜುನ್ ಹಲಗಿಗೌಡರಿಗೂ ಅಭಿನಂದನೆ ಸಲ್ಲಿಸಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...