ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸ್ಫೂರ್ತಿ: ಸಿಎಂ ಸಿದ್ದರಾಮಯ್ಯ

Date:

  • ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಬೆಂಗಳೂರಿನಲ್ಲಿ ಸಿಎಂ ಚಾಲನೆ
  • ‘ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಕಿತ್ತೂರು ಉತ್ಸವ ಆರಂಭಿಸಿದೆ’

ಕಿತ್ತೂರು ರಾಣಿ ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸ್ಫೂರ್ತಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿ ಮಾತನಾಡಿದರು.

“ಕಿತ್ತೂರು ಚನ್ನಮ್ಮ ತನ್ನ ಸಣ್ಣ ಸೈನ್ಯದಿಂದ ಬ್ರಿಟಿಷರ ಬೃಹತ್ ಸೈನ್ಯಕ್ಕೆ ಸೆಡ್ಡು ಹೊಡೆದ ಧೀಮಂತ ರಾಣಿ. ಈಕೆಯ ಧೈರ್ಯ ಮತ್ತು ಆದರ್ಶ ಯುವ ಸಮೂಹವನ್ನು, ಇವತ್ತಿನ ಪೀಳಿಗೆಯನ್ನು ತಲುಪಬೇಕು ಎನ್ನುವ ಕಾರಣಕ್ಕೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಕಿತ್ತೂರು ಉತ್ಸವ ಆರಂಭಿಸಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲರೂ ಕಿತ್ತೂರು ರಾಣಿ ಚನ್ನಮ್ಮ ಆಗಲು ಸಾಧ್ಯವಿಲ್ಲ. ಆದರೆ, ಅವರ ಧರ್ಯ, ಸಾಹಸ, ದೇಶಪ್ರೇಮ ಹಾಗೂ ಸ್ವಾಭಿಮಾನವನ್ನು ಜೀವನ ದಲ್ಲಿ ಬೆಳಸಿಕೊಳ್ಳಬೇಕು. ಅಕ್ಟೋಬರ್ 23, 24 ಹಾಗೂ 25 ರಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಚನ್ನಮ್ಮ ಕಿತ್ತೂರು ಉತ್ಸವ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕರಿಸಬೇಕು” ಎಂದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿತ್ತೂರು ಉತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿದರು. ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ವಿನಯ್ ಕುಲಕರ್ಣಿ, ಬಾಬಾ ಸಾಹೇಬ್ ಪಾಟೀಲ್, ಮಹಾಂತೇಶ ಕೌಜಲಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಕೆ. ಧರಣಿದೇವಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...