ದೋಷಾರೋಪ ಪಟ್ಟಿ ಎಂಬುದು ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ್

Date:

ರಾಮೇಶ್ವರಂ ಕೆಫೆ ‌ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ದೋಷಾರೋಪ ಪಟ್ಟಿಯಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ‌ ಮಂಗಳವಾರ (ಸೆ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ ಮಿಕ್ಕ ವಿಚಾರಗಳು ಗೊತ್ತಿಲ್ಲ” ಎಂದರು.

ರೇಣುಕಸ್ವಾಮಿ ಕೊಲೆ‌ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ಗು ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್‌ ಏನು ತೀರ್ಮಾನ ಮಾಡುತ್ತದೆ ನೋಡೋಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ.‌ ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ” ಎಂದು ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗೆ ಕಡಿವಾಣ ಹಾಕಲು ಹೈಕಮಾಂಡ್‌ಗೆ ಪತ್ರ ಬರೆದಿರುವ ಕುರಿತು ಮಾತನಾಡಿ, “ಮುಖ್ಯಮಂತ್ರಿಗಳ ಸ್ಥಾನದ‌ ಬಗ್ಗೆ ಚರ್ಚೆ ಅನಗತ್ಯ ಎಂಬ ವಿಚಾರವನ್ನು ನಾನು ಸಹ ಹೇಳಿದ್ದೇನೆ. ಮಾಧ್ಯಮದವರು ಮುಖ್ಯಮಂತ್ರಿಯಾಗುತ್ತೀರ ಎಂದು ಕೇಳಿದಾಗ, ನಾವು ಬೇಡ ಅಂತ ಯಾಕೆ ಹೇಳಬೇಕು ಅಂತ ನನಗೆ ಆ ಸ್ನೇಹಿತರು ಹೇಳಿದ್ದಾರೆ. ಅಷ್ಟು ಬಿಟ್ಟರೆ ಬೇರೆ ಏನು ಇಲ್ಲ” ಎಂದರು.

“ಸಚಿವ ಎಂ ಬಿ ಪಾಟೀಲ್ ಅವರು ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ‌. ನಾನು ಸಹ ಗೃಹ ಇಲಾಖೆಗೆ ಸಂಬಂಧಿಸಿದ ಕೆಲಸ ಇದ್ದರೆ ದೆಹಲಿಗೆ ಹೋಗುತ್ತೇನೆ. ಹೋದಾಕ್ಷಣ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಮಾಡಲು ಹೋಗಿದ್ದರು ಅಂತ ಹೇಳಿ ಬಿಟ್ಟರೆ ಹೇಗೆ? ಈ ಬಗ್ಗೆ ಚರ್ಚೆಯೇ ಅನಗತ್ಯ” ಎಂದು ಹೇಳಿದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...