ಕ್ಷೇತ್ರ ಒಂದು; ಮೂರು ಪಕ್ಷದಿಂದ ಮಾವ, ಸೊಸೆಯಂದಿರು ಸ್ಪರ್ಧೆ!

Date:

ಹರಿಯಾಣದ ಹಿಸಾರ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕದನಕ್ಕೆ ವೇದಿಕೆ ಸಜ್ಜಾಗಿದ್ದು, ಈ ಕ್ಷೇತ್ರದಲ್ಲಿ ಮಾವ, ಸೊಸೆಯಂದಿರು ಸ್ಪರ್ಧೆ ಮಾಡುತ್ತಿದ್ದಾರೆ. ಪ್ರಭಾವಿ ಚೌತಾಲಾ ಕುಟುಂಬದ ಮೂವರು ಸದಸ್ಯರು ರಾಜಕೀಯವಾಗಿ ಬೇರ್ಪಟ್ಟಿದ್ದು ಪರಸ್ಪರರ ವಿರುದ್ಧ ಕಣಕ್ಕೆ ಇಳಿದಿದ್ದಾರೆ.

ಶಾಸಕಿ ನೈನಾ ಚೌತಾಲಾ ಜನನಾಯಕ ಜನತಾ ಪಕ್ಷದಿಂದ (ಜೆಜೆಪಿ), ಸುನೈನಾ ಚೌತಾಲಾ ಇಂಡಿಯನ್ ನ್ಯಾಷನಲ್ ಲೋಕ ದಳದಿಂದ (ಐಎನ್‌ಎಲ್‌ಡಿ) ಮತ್ತು ಈ ಇಬ್ಬರು ಹೆಂಗಳೆಯರ ಮಾವ ರಂಜಿತ್ ಸಿಂಗ್ ಚೌತಾಲಾ ಬಿಜೆಪಿಯಿಂದ ಟಿಕೆಟ್ ಪಡೆದುಕೊಂಡಿದ್ದಾರೆ.

ಸುನೈನಾ ಚೌತಾಲಾ ಮತ್ತು ನೈನಾ ಚೌತಾಲಾ ಅವರ ಮಾವಂದಿರ ಸಹೋದರ ರಂಜಿತ್ ಚೌತಾಲಾ ಆಗಿದ್ದು, ಈಗ ಮಾವ ಮತ್ತು ಸೊಸೆಯಂದಿರ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಈ ಕ್ಷೇತ್ರದಲ್ಲಿ ಮೂರು ಬಾರಿ ಸಂಸದರಾಗಿರುವ ಹಿರಿಯ ನಾಯಕ ಜೈ ಪ್ರಕಾಶ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ಕಾಂಗ್ರೆಸ್ ಅನ್ನು ಹಾಡಿ ಹೊಗಳಿ ಬಿಜೆಪಿಯನ್ನು ತೆಗಳಿದ ಚಕ್ರವರ್ತಿ ಸೂಲಿಬೆಲೆ!

57 ವರ್ಷದ ನೈನಾ ಚೌತಾಲಾ ಅವರು ಜೆಜೆಪಿ ಮುಖ್ಯಸ್ಥ ಅಜಯ್ ಸಿಂಗ್ ಚೌಟಾಲಾ ಅವರ ಪತ್ನಿ ಮತ್ತು ಹರಿಯಾಣದ ಮಾಜಿ ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಅವರ ತಾಯಿಯಾಗಿದ್ದಾರೆ.

ಇನ್ನು ಐಎನ್‌ಎಲ್‌ಡಿ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ 47 ವರ್ಷದ ಸುನೈನಾ ಚೌತಾಲಾ ಐಎನ್‌ಎಲ್‌ಡಿಯ ನಾಯಕ ಅಭಯ್ ಸಿಂಗ್ ಚೌತಾಲಾ ಅವರ ಸೋದರ ಸಂಬಂಧಿ ರವಿ ಚೌತಾಲಾ ಅವರ ಪತ್ನಿಯಾಗಿದ್ದಾರೆ.

2019 ರ ವಿಧಾನಸಭಾ ಚುನಾವಣೆಯ ನಂತರ ಹರಿಯಾಣದಲ್ಲಿ ಬಿಜೆಪಿ ಮತ್ತು ಜೆಜೆಪಿ ಮೈತ್ರಿ ಮಾಡಿಕೊಂಡಿದ್ದವು. ಆದರೆ 2024ರ ಮಾರ್ಚ್ ತಿಂಗಳಿನಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿ ನಯಾಬ್ ಸಿಂಗ್ ಸೈನಿ ನೇತೃತ್ವದ ಹೊಸ ಬಿಜೆಪಿ ಸರ್ಕಾರ ರಚನೆಯಾದಾಗ ಈ ಮೈತ್ರಿಯು ಮುರಿದು ಬಿದ್ದಿದೆ.

78 ವರ್ಷದ ರಂಜಿತ್ ಚೌತಾಲಾ ಅವರು ಮಾರ್ಚ್‌ನಲ್ಲಿ ಸಿರ್ಸಾ ಜಿಲ್ಲೆಯ ರಾನಿಯಾದ ಸ್ವತಂತ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದಾದ ಬಳಿಕ ಬಿಜೆಪಿಗೆ ಸೇರ್ಪಡೆಯಾಗಿದ್ದು, ಈಗ ಹಿಸಾರ್ ಲೋಕಸಭೆ ಕ್ಷೇತ್ರದ ಟಿಕೆಟ್‌ಗಿಟ್ಟಿಸಿಕೊಂಡಿದ್ದಾರೆ. ಜೊತೆಗೆ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅವರು ಸಚಿವರಾಗಿ ಮುಂದುವರಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...