ಛತ್ತೀಸಗಢ | ಭದ್ರತಾ ಪಡೆ-ಮಾವೋವಾದಿಗಳ ನಡುವೆ ಗುಂಡಿನ ಕಾಳಗ : 16 ಮಂದಿ ಹತ್ಯೆ

Date:

ಛತ್ತೀಸಗಢದ ಕೇರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಮಾವೋವಾದಿಗಳ ವಿರುದ್ಧ ಬಿಎಸ್‌ಎಫ್‌ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಇಂದು (ಶನಿವಾರ) ಜಂಟಿ ಕಾರ್ಯಾಚರಣೆ ನಡೆಸಿದ್ದು, ಗುಂಡಿನ ಕಾಳಗದಲ್ಲಿ ಒಟ್ಟು 16 ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೇರ್ಲಾಪಾಲ್ ಪ್ರದೇಶದ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯು ಮಾವೋವಾದಿಗಳ ವಿರೋಧಿ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಈ ಸಂದರ್ಭದಲ್ಲಿ ಎನ್‌ಕೌಂಟರ್‌ ನಡೆದಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಖಚಿತ ಮಾಹಿತಿ ಆಧರಿಸಿ, ಬಿಎಸ್‌ಎಫ್‌ ಹಾಗೂ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಸ್ಥಳದಿಂದ 16 ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತಷ್ಟು ಶೋಧ ಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

https://twitter.com/i/status/1905867996586819588

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ ನಡೆದ ಭೀಕರ್‌ ಎನ್‌ಕೌಂಟರ್‌ ಮಾತ್ರವಲ್ಲದೆ, ಮಾರ್ಚ್‌ 1ರಂದು ಕೂಡ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಆ ವಳೆ, ಇಬ್ಬರು ನಕ್ಸಲ್ ಹೋರಾಟಗಾರರನ್ನು ಕೊಲ್ಲಲಾಗಿತ್ತು.

ಕಳೆದ ತಿಂಗಳು (ಫೆಬ್ರವರಿ) ಬಸ್ತಾರ್ ಪ್ರದೇಶದಲ್ಲಿ ನಡೆದ ಕಾರ್ಯಾರಣೆಯಲ್ಲಿ 40 ಮಂದಿ ಮಾವೋವಾದಿ ಹೋರಾಟಗಾರರನ್ನು ಕೊಲ್ಲಲಾಗಿದೆ. ಫೆಬ್ರವರಿಯಿಂದ ಇಂದಿನವರೆಗೆ 58 ಮಂದಿ ನಕ್ಸಲ್‌ ಹೋರಾಟಗಾರರನ್ನು ಭದ್ರತಾ ಪಡೆಗಳು ಕೊಂದಿವೆ.

2026ರ ಮಾರ್ಚ್‌ ವೇಳೆಗೆ ದೇಶದಲ್ಲಿ ನಕ್ಸಲ್ ಹೋರಾಟವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಆದರೆ, ಅವರು ನಕ್ಸಲ್‌ ಹೋರಾಟಗಾರರನ್ನು ಕೊಲ್ಲುವ ಮೂಲಕ ಹೋರಾಟದ ದನಿಯ ಸದ್ದಡಗಿಸುವ ದಾರಿ ಹಿಡಿದ್ದಾರೆ. ಆದರೆ, ದಕ್ಷಿಣದ ರಾಜ್ಯಗಳು ಪ್ರಮುಖವಾಗಿ ಕರ್ನಾಟಕವು ಮಾವೋವಾದಿ ಹೋರಾಟಗಾರರಿಗೆ ಸಶಸ್ತ್ರ ಹೋರಾಟವನ್ನು ಬಿಟ್ಟು, ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬಂದು ಹೋರಾಟ ಮುಂದುವರೆಸಲು ಅವಕಾಶ ಮಾಡಿಕೊಡುತ್ತಿದೆ.

ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ನಕ್ಸಲ್ ಹೋರಾಟಗಾರರಿಗೆ ಕರ್ನಾಟಕ ಸರ್ಕಾರ ಕರೆಕೊಟ್ಟಿದೆ. ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬರುವ ನಕ್ಸಲ್ ಹೋರಾಟಗಾರರಿಗೆ ತಮ್ಮ ವಿರುದ್ಧದ ಪ್ರಕರಣಗಳ ತ್ವರಿತ ವಿಚಾರಣೆ ಮತ್ತು ಶೀಘ್ರ ಜಾಮೀನು ಪಡೆಯಲು ವಿಶೇಷ ನ್ಯಾಯಾಲಯ ಸ್ಥಾಪನೆ, ಶರಣಾಗತಿ ಪ್ಯಾಕೇಜ್‌ಗಳನ್ನು ನೀಡುತ್ತಿದೆ. ಆ ಮೂಲಕ, ನಕ್ಸಲ್ ಹೋರಾಟಗಾರರನ್ನು ಗೌರವಯುತವಾಗಿ ಮುಖ್ಯವಾಹಿನಿಗೆ ಕರೆತಂದು, ಕರ್ನಾಟಕವನ್ನು ನಕ್ಸಲ್ ಹೋರಾಟ ಮುಕ್ತ ರಾಜ್ಯವೆಂದು ಘೋಷಿಸಿದೆ.

ಆದರೆ, ಕೇಂದ್ರ ಮತ್ತು ಉತ್ತರ ಇತರ ರಾಜ್ಯ ಸರ್ಕಾರಗಳು ನಕ್ಸಲ್ ಹೋರಾಟಗಾರರನ್ನು ಕೊಲ್ಲುವುದನ್ನೇ ಆಧ್ಯತೆಯನ್ನಾಗಿ ಮಾಡಿಕೊಂಡಿವೆ. ನಿರಂತರ ಕಾರ್ಯಾಚರಣೆ ನಡೆಸಿ, ಹತ್ಯೆ ಮಾಡುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...