ಛತ್ತಿಸ್‌ಘಡ ಮತ ಎಣಿಕೆ | ಅಧಿಕಾರ ಉಳಿಸಿಕೊಳ್ಳುವ ಭರವಸೆಯಲ್ಲಿದೆ ಕಾಂಗ್ರೆಸ್‌

Date:

ಪಂಚರಾಜ್ಯ ಚುನಾವಣೆಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಭಾನುವಾರ ಮಧ್ಯಾಹ್ನದ ವೇಳೆಗೆ ಹೊರಬೀಳಲಿದೆ. ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರಸ್‌ ಮತ್ತು ಅಧಿಕಾರಕ್ಕೇರುವ ಭರವಸೆಯೊಂದಿಗೆ ಮುನ್ನಡೆ ಸಾಧಿಸಿದೆ. ಆದರೂ, 2018ರಲ್ಲಿ ಚುನಾವಣೆಯಲ್ಲಿ 68 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್‌, ಈ ಬಾರಿ ಸರಾಸರಿ 48 ಸ್ಥಾನಗಳಿಗೆ ಕುಸಿಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ.

ಬಿಜೆಪಿ ಈ ಬಾರಿ ಛತ್ತಿಸ್‌ಗಢವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದೆ. ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿದೆ. ರಾಜ್ಯದ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ ಅವರು ತಮ್ಮ ತವರು ಪಟಾಣ್‌ನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಈ ಬಾರಿಯೂ ಅವರೇ ಮುಖ್ಯಮಂತ್ರಿ ಮುಖವೆಂದು ಹೇಳಲಾಗಿದೆ. ಆದರೆ, ಕಾಂಗ್ರೆಸ್‌ ಅವರೇ ಈ ಬಾರಿಯ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಹೇಳಿಲ್ಲ.

ಅದೇ ರೀತಿ ಮಾಜಿ ಮುಖ್ಯಮಂತ್ರಿ ರಮಣ್‌ ಸಿಂಗ್‌ ಅವರು ಬಿಜೆಪಿಯ ಮುಖ್ಯಮಂತ್ರಿ ಮುಖವೆಂದು ಹೇಳಲಾಗಿದೆ. ಆದರೆ, ಬಿಜೆಪಿ ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಅವರನ್ನು ಅಧಿಕೃತವೆಂದು ಹೇಳಿಲ್ಲ. ಅವರು, ರಮಣ್ ಸಿಂಗ್ ರಾಜನಂದಗಾಂವ್‌ನಿಂದ ಸ್ಪರ್ಧಿಸಿದ್ದಾರೆ. ಇನ್ನು, ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವು ಅವರು ಕಾಂಗ್ರೆಸ್‌ನಿಂದ ಅಂಬಿಕಾಪುರದಲ್ಲಿ ಸ್ಪರ್ಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಛತ್ತೀಸ್‌ಗಢದ 90 ಸ್ಥಾನಗಳ ವಿಧಾನಸಭೆಗೆ ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.

ಇಂದು (ಡಿ.3) ಮತ ಎಣಿಕೆ ನಡೆಯುತ್ತಿದ್ದು, ಅಂಚೆ ಮತಪತ್ರಗಳ ಮತ ಎಣಿಕೆ ಕಾರ್ಯ ಮುಗಿದಿದೆ. ಅಂಚೆ ಮತಪತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 53 ಸ್ಥಾನಗಳಲ್ಲಿ ಮುಂದಿದೆ. ಬಿಜೆಪಿ 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...