ಛತ್ತೀಸ್‌ಗಡ ಮತ ಎಣಿಕೆ; ಮುನ್ನಡೆಯಲ್ಲಿ ಬಿಜೆಪಿ- ಕಾಂಗ್ರೆಸ್‌ ನಡುವೆ ಹಾವು ಏಣಿ ಆಟ ಮುಗಿದು ಬಹುಮತದತ್ತ ಬಿಜೆಪಿ

Date:

  • ಆರಂಭಿಕ ಹಂತದಲ್ಲಿ ಮುನ್ನಡೆಯಲ್ಲಿದ್ದ ಕಾಂಗ್ರೆಸ್‌ಗೆ ತೀವ್ರ ಮುಖಭಂಗ
  • 53 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಬೆಳಿಗ್ಗೆ ಎಂಟು ಗಂಟೆಗೆ ಮತ ಎಣಿಕೆ ಶುರುವಾದ ನಂತರ ಛತ್ತೀಸ್‌ಗಡದಲ್ಲಿ ನಿರಂತರ ಮುನ್ನಡೆ ಕಾಯ್ದು ಕೊಂಡಿದ್ದ ಕಾಂಗ್ರೆಸ್‌ 10 ಗಂಟೆಯ ವೇಳೆಗೆ ಸ್ವಲ್ಪ ಹಿನ್ನೆಡೆ ಅನುಭವಿಸಿತ್ತು. ಕಾಂಗ್ರೆಸ್‌ ಗಿಂತ ಐದಾರು ಸೀಟುಗಳ ಮುನ್ನಡೆಯನ್ನು ಬಿಜೆಪಿ ಪಡೆದಿತ್ತು. 10:20ರ ವೇಳೆಗೆ 45ಸ್ಥಾನ ಪಡೆದು ಬಿಜೆಪಿ ಮತ್ತು ಕಾಂಗ್ರೆಸ್‌ ಸಮಬಲದಲ್ಲಿ ನಿಂತಿದ್ದವು. ನಂತರ ಕಾಂಗ್ರೆಸ್‌ ಮುನ್ನಡೆಯತ್ತ ಹೆಜ್ಜೆ ಹಾಕಿತ್ತು.

ಹತ್ತೂವರೆಯ ನಂತರ ಬಿಜೆಪಿ ಚೇತರಿಕೆ ಕಂಡಿದೆ. ಹಾವು ಏಣಿ ಆಟದ ತರ ಒಮ್ಮೆ ಆ ಕಡೆ, ಒಮ್ಮೆ ಈ ಕಡೆ ಮುನ್ನಡೆ ತೋರಿಸುತ್ತಿತ್ತು. ಹನ್ನೊಂದು ಗಂಟೆಗೆ ಬಿಜೆಪಿ 48 ಕಾಂಗ್ರೆಸ್‌ 40 ಮುನ್ನಡೆಯಲ್ಲಿದ್ದವು.

ಮತದಾನೋತ್ತರ ಸಮೀಕ್ಷೆಯಲ್ಲಿ ಛತ್ತೀಸ್‌ಗಡ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸುಲಭದ ವಿಜಯ ಸ್ಪಷ್ಟ ಬಹುಮತ ಎಂದು ಹೆಚ್ಚಿನ ಸಮೀಕ್ಷೆಗಳು ಹೇಳಿದ್ದವು. ಮಧ್ಯಪ್ರದೇಶದಲ್ಲಿ ಸಮ ಬಲದ ಹೋರಾಟ ಎಂದಿದ್ದವು. ಆದರೆ, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್‌ ಅಭೂತಪೂರ್ವ ಗೆಲುವಿನ ಮುನ್ನಡೆ ತೋರಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಛತ್ತೀಸ್‌ಗಡದಲ್ಲಿ 11:45ರ ವೇಳೆಗೆ ಬಿಜೆಪಿ ಕಾಂಗ್ರೆಸ್‌ಗಿಂತ ಐದಾರು ಸ್ಥಾನಗಳಲ್ಲಿ ಮುನ್ನಡೆಯಲ್ಲಿತ್ತು. 12 ಗಂಟೆಯ ವೇಳೆಗೆ ಆ ಅಂತರ ಹದಿನೈದು ಸ್ಥಾನಗಳಿಗೆ ಏರಿಕೆಯಾಗಿದೆ. ಬಿಜೆಪಿ 53 ಕಾಂಗ್ರೆಸ್‌ 37ರಲ್ಲಿ ಮುನ್ನಡೆಯಲ್ಲಿವೆ. ಸ್ಥಾನಗಳಲ್ಲಿ ಇತರರು ಇದ್ದಾರೆ. ಅಲ್ಲಿಗೆ ನಾಲ್ಕು ರಾಜ್ಯಗಳ ಫಲಿತಾಂಶ 2:2 ಹೋಗಿ 3:1 ಆಗುವ ಲಕ್ಷಣ ಕಾಣುತ್ತಿದೆ.

ಛತ್ತೀಸ್‌ಗಡದಲ್ಲಿ ಒಟ್ಟು 90 ಕ್ಷೇತ್ರಗಳಲ್ಲಿ 1,181 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 2 ಹಂತಗಳಲ್ಲಿ ಮತದಾನವಾಗಿತ್ತು. ಮೊದಲ ಹಂತದಲ್ಲಿ ನ.7ರಂದು 20 ಸ್ಥಾನಗಳಿಗೆ ಮತದಾನ ನಡೆದಿತ್ತು ಮತ್ತು 2ನೇ ಹಂತದಲ್ಲಿ ನ.17ರಂದು 70 ಸ್ಥಾನಗಳಿಗೆ ಮತದಾನ ನಡೆದಿತ್ತು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ 68 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಅಧಿಕಾರ ಪಡೆದಿತ್ತು. ಬಿಜೆಪಿ ಕೇವಲ 15 ಕ್ಷೇತ್ರಗಳ ಜಯಗಳಿಸಿ ಹೀನಾಯ ಸೋಲು ಕಂಡಿತ್ತು. ಈ ಬಾರಿ ಮತ್ತೆ ಛತ್ತೀಸ್‌ಗಡದಲ್ಲಿ ಕಮಲ ಅರಳುವ ಲಕ್ಷಣ ಗೋಚರಿಸಿದೆ. ಎಸ್‌ಟಿ ಸಮುದಾಯವೇ ಬಹುಸಂಖ್ಯಾತರು ಇರುವ ಇಲ್ಲಿ 10 ಎಸ್ಸಿ, 29 ಎಸ್ಟಿ ಸೀಟುಗಳು ನಿರ್ಣಾಯಕ. ಆದಿವಾಸಿ ಸಮುದಾಯಗಳ ಮತಗಳು ಕಾಂಗ್ರೆಸ್‌ ಪರವಾಗಿವೆ ಎಂದೇ ನಂಬಲಾಗಿತ್ತು. ಹಾಲಿ ಮುಖ್ಯಮಂತ್ರಿ ಭೂಪೇಶ್‌ ಬಘೇಲ ಅವರ ವರ್ಚಸ್ಸಿನ ಬಗ್ಗೆಯೂ ಉತ್ತಮ ಅಭಿಪ್ರಾಯವೇ ಇತ್ತು. ಅವರ ವರ್ಚಸ್ಸು ಬಹುಮತ ತರುವಲ್ಲಿ ಕೆಲಸ ಮಾಡಿಲ್ಲ ಅನ್ನಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...