ಮಾವು ಬೆಳೆಗಾರರಿಗೆ ಪರಿಹಾರ | ಕೇಂದ್ರ ಒತ್ತಾಯಿಸಲು ಕೃಷಿ ಸಚಿವರಿಗೆ ಸಿಎಂ ಸೂಚನೆ: ಎಚ್ ಕೆ ಪಾಟೀಲ್

Date:

ರಾಜ್ಯದಲ್ಲಿನ ಮಾವು ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದು, ತಕ್ಷಣ ಕೇಂದ್ರ ಸರಕಾರವನ್ನು ಸಂಪರ್ಕಿಸಿ ಪರಿಹಾರ ಕೋರುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಾವು ಬೆಳೆಗಾರರ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಕೋಲಾರ, ಬೆಂಗಳೂರು ಗ್ರಾಮಾಂತರ ಭಾಗದ ಸಚಿವರು ವಿಷಯ ಪ್ರಸ್ತಾಪಿಸಿ ಚರ್ಚೆ ನಡೆಸಿದರು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾವು ಬೆಳೆಗಾರರಿಗೆ ಪರಿಹಾರ ನೀಡುವ ಸಂಬಂಧ ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚೆ ನಡೆಸಲು ಹಾಗೂ ಅಗತ್ಯವಿದ್ದಲ್ಲಿ ಹೊಸದಿಲ್ಲಿಗೆ ಹೋಗಿ ಅವರನ್ನು ಭೇಟಿ ಮಾಡಿ, ಸಾಧ್ಯವಾದಷ್ಟು ಹೆಚ್ಚಿನ ಪರಿಹಾರವನ್ನು ನೀಡುವಂತೆ ಒತ್ತಾಯಿಸಬೇಕೆಂದು ಕೃಷಿ ಸಚಿವರು ಹಾಗೂ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು ಎಂದು ಅವರು ತಿಳಿಸಿದರು.

ಆಂಧ್ರಪ್ರದೇಶದ ಚಿತ್ತೂರು ಭಾಗದಲ್ಲಿ ನಮ್ಮ ರಾಜ್ಯದ ಮಾವಿನ ಹಣ್ಣುಗಳ ಪ್ರವೇಶಕ್ಕೆ ತಡೆಯೊಡ್ಡಿರುವ ಕುರಿತು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ, ಆಂಧ್ರಪ್ರದೇಶದ ಮುಖ್ಯಮಂತ್ರಿಗೆ ಪತ್ರ ಬರೆದು ರಾಜ್ಯದ ಮಾವಿನ ಹಣ್ಣು ಪ್ರವೇಶಕ್ಕೆ ತಡೆಯೊಡ್ಡಿರುವುದನ್ನು ತೆರವುಗೊಳಿಸುವಂತೆ ಕೋರಿದ್ದಾರೆ ಎಂದು ಎಚ್ ಕೆ ಪಾಟೀಲ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...