ಬಕ್ರೀದ್ | ದ್ವೇಷ ಹುಟ್ಟುಹಾಕುವ ಶಕ್ತಿಗಳಿಗೆ ಮಹತ್ವ ನೀಡಬಾರದು: ಸಿಎಂ ಸಿದ್ದರಾಮಯ್ಯ

Date:

ಬಕ್ರೀದ್‌ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಿಎಂ

ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಕ್ರೀದ್ ಪ್ರಯುಕ್ತ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮಾತನಾಡಿದ ಅವರು, “ನಾನಾ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲರೂ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು” ಎಂದು ಸಲಹೆ ನೀಡಿದರು.

“ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು. ಮನುಷ್ಯರು ಪ್ರೀತಿ, ವಿಶ್ವಾಸದಿಂದ, ಮನುಷ್ಯರಂತೆ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಯ ಜೊತೆಗೆ ಜನತೆಯೂ ಅಭಿವೃದ್ಧಿ ಯಾಗಬೇಕು. ದೇವರು ಎಲ್ಲರಿಗೂ ಸದ್ಭುದ್ದಿ ನೀಡಿ ಮನುಷ್ಯರಾಗಿ ಬಾಳುವ ಗುಣವನ್ನು ನೀಡಲಿ” ಎಂದು ಹಾರೈಸಿದರು.

“ರಾಜ್ಯದ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ. ಬಕ್ರೀದ್ ಹಬ್ಬ ತ್ಯಾಗದ ಸಂಕೇತ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್‌ ಸೇರಿ ಸಮುದಾಯದ ಮುಖಂಡರು, ಹಿರಿಯರು ಉಪಸ್ಥಿತರಿದ್ದರು.

ಬಕ್ರೀದ್‌ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿ ಶುಭ ಹಾರೈಸಿದ್ದಾರೆ. “ತ್ಯಾಗ – ಬಲಿದಾನದ ಸಂಕೇತವಾಗಿ ಆಚರಿಸಲ್ಪಡುವ ಪವಿತ್ರ ಬಕ್ರೀದ್ ಹಬ್ಬವು ನಾಡಿನಲ್ಲಿ ಸ್ನೇಹ, ಸೌಹಾರ್ದತೆಯು ಶಾಶ್ವತವಾಗಿ ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಹಾರೈಕೆಗಳು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...