ಅಮಾನತುಗೊಂಡ ಪೊಲೀಸ್‌ಗೆ ಮುಖ್ಯಮಂತ್ರಿ ಪದಕ, ಸರ್ಕಾರದ ನಡೆ ಖಂಡಿಸಿದ ಶಾಸಕ ಯತ್ನಾಳ

Date:

ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಂಡಿರುವ ಸಿಸಿಬಿ ಘಟಕದ ಹೆಡ್‌ ಕಾನ್‌ಸ್ಟೆಬಲ್ ಸಲೀಂ ಪಾಷಾ ಅವರನ್ನು ಪೊಲೀಸ್‌ ಇಲಾಖೆಯ 2023ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿರುವ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರವಾಗಿ ವಿರೋಧಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಮೈಸೂರು ಸಿಸಿಬಿ ಘಟಕದ ಪೊಲೀಸ್ ಕಾನ್‌ಸ್ಟೆಬಲ್ ಸಲೀಂ ಪಾಷಾ ಅವರು ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳವು ಸೇರಿದಂತೆ ಅನೇಕ ಗಂಭೀರ ಆರೋಪಿಗಳನ್ನು ಎದುರಿಸುತ್ತಿದ್ದಾರೆ. ಆದರೆ, ಸಲೀಂ ಪಾಷಾಗೆ ಮುಖ್ಯಮಂತ್ರಿಗಳ ಪದಕ ನೀಡಿದ್ದೇಕೆ ಎಂಬುದನ್ನು ರಾಜ್ಯದ ಜನತೆಗೆ ತಿಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಆರೋಪ ಹೊತ್ತ ಪೊಲೀಸರಿಗೆ ಪದಕ ನೀಡಿದರೆ, ಕಷ್ಟಪಟ್ಟು ದುಡಿಯುತ್ತಿರುವ ನಿಷ್ಠಾವಂತ ಪೇದೆಗಳಿಗೆ, ಅಧಿಕಾರಗಳಿಗೆ ಮನೋಸ್ಥೈರ್ಯ ಏನಾಗಬೇಕೆಂದು ಯೋಚಿಸಿದ್ದೀರಾ? ನಿಮ್ಮ ಆಯ್ಕೆಯ ಮಾನದಂಡಗಳು ಏನೆಂಬುದನ್ನು ತಿಳಿಸಿ. ಕೂಡಲೇ ಪದಕವನ್ನು ವಾಪಾಸ್ ಪಡೆಯಬೇಕು. ಜತೆಗೆ, ಸಲೀಂ ಪಾಷಾ ವಿರುದ್ಧ ತನಿಖೆಯನ್ನು ಚುರುಕುಗೊಳಿಸಿ ಎಂದು ಯತ್ನಾಳ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಲೀಂ ಪಾಷಾ ಮೇಲಿನ ಆರೋಪ ಏನು?

ಸಿಸಿಬಿ ಘಟಕದ ಹೆಡ್‌ ಕಾನ್‌ಸ್ಟೆಬಲ್ ಪೇದೆ ಸಲೀಂ ಪಾಷಾ ಅವರಿಗೂ ಮುಖ್ಯಮಂತ್ರಿ ಪದಕ ದೊರಕಿದೆ. ಆದರೆ ಇವರು ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಹಾಗೂ ಗಾಂಜಾ ಪ್ರಕರಣಗಳಲ್ಲಿ ಆರೋಪಿಗಳು ಹಾಗೂ ಅವರ ಸಂಬಂಧಿಕರ ಜೊತೆಗೆ ಫೋನ್‌ ಮೂಲಕ ಸಂಪರ್ಕಿಸಿರುವುದು ಸಾಬೀತಾಗಿದ್ದು, ವಿಚಾರಣೆ ನಡೆಯುತ್ತಿರುವಂತೆಯೇ ರಾಜ್ಯ ಪೊಲೀಸ್‌ (ಶಿಸ್ತು ನಡಾವಳಿ) ಅನ್ವಯ ಜು.12ರಂದು ಸಿಸಿಬಿ ಘಟಕದ ಕಾನ್‌ಸ್ಟೆಬಲ್ ಸಲೀಂ ಪಾಷಾ ಅವರನ್ನು ಅಮಾನತುಗೊಳಿಸಿ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ಆದೇಶಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...