ಚಿಕ್ಕಮಗಳೂರು ಜಿಲ್ಲೆ , ಕೊಪ್ಪ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯಿತಿ ಅತ್ತಿಕುಳಿ ನಿವಾಸಿಯಾದ ಅತ್ತಿಕುಳಿ ಸುಂದರೇಶ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ರೈತಾಪಿ ವರ್ಗದ ಕುಟುಂಬದವರು ಹಾಗೆಯೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸುಮಾರು ವರ್ಷಗಳಿಂದ ಶೃಂಗೇರಿ ಕ್ಷೇತ್ರದ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಬಿಜೆಪಿ, ಜೆಡಿಎಸ್,ಕಾಂಗ್ರೆಸ್ ಮೂರು ಪಕ್ಷದಲ್ಲಿ ಕಾರ್ಯಕರ್ತರಾಗಿದ್ದರು.
ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಂಗಗಳ ಹಾವಳಿ; ಬೇಸತ್ತ ರೈತರು
ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಿದ್ದರು. ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳನ್ನು ಕಂಡು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗಿದೆ.





