ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ಕುರಿತು ಕೇರಳ ಸಂಸದ, ಶಾಸಕರು ಭೇಟಿ ನೀಡಿ ಹೇಳಿಕೆ ಕೊಟ್ಟಿರುವ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಮಾಜಿ ಶಾಸಕ ಸಿ.ಟಿ ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೇರಳದ ಅಕ್ರಮಗಳನ್ನು ಸಮರ್ಥಿಸುವ ಅನಿವಾರ್ಯತೆ ಸರ್ಕಾರಕ್ಕೆ ಇರಬಹುದು, ಆದರೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಕನ್ನಡಿಗರ ಹಿತಾಸಕ್ತಿಯನ್ನು ಒತ್ತೆ ಇಡಬಾರದು ಕನ್ನಡಿಗರ ಸ್ವಾಭಿಮಾನವನ್ನು ಸಾಯಿಸದಂತೆ ಎಂದು ಮಾಜಿ ಶಾಸಕ ಸಿ.ಟಿ ರವಿ ಟೀಕಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಹೊಸ ವರ್ಷಾಚರಣೆ; ಅಹಿತಕರ ಘಟನೆ ಸಂಭವಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ
ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರು ಮೌನ ಮುರಿದು ಧ್ವನಿ ಎತ್ತಬೇಕು. ನಾವು ಮಾತನಾಡಿದರೆ ಅದನ್ನು ರಾಜಕೀಯ ಎಂದು ಕರೆಯಲಾಗುತ್ತದೆ, ಆದರೆ ಕನ್ನಡಿಗರ ಸ್ವಾಭಿಮಾನವನ್ನು ಒತ್ತೆ ಇಡಲು ಜನತೆ ಯಾವ ರಾಜಕೀಯ ಪಕ್ಷಕ್ಕೂ ಅಧಿಕಾರ ನೀಡಿಲ್ಲ, ಕೇರಳದ ಸಂಸದರು ಇಲ್ಲಿಗೆ ಬಂದು ಕರ್ನಾಟಕಕ್ಕೆ ಪಾಠ ಹೇಳುವ ಅಗತ್ಯವಿಲ್ಲ ಎಂದು ಮಾಜಿ ಶಾಸಕ ಸಿ.ಟಿ ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.





