ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಎರಡನೇ ಸಾವು ಸಂಭವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಹುಣಸೆಹಳ್ಳಿ ಗ್ರಾಮ ಸಮೀಪವಿರುವ ಪುರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ. ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡಾನೆ ಸೆರೆ ಕಾರ್ಯಾಚರಣೆ ಆರಂಭ
ಕಾಡಾನೆ ಎಲ್ಲೆಂದರಲ್ಲೇ ಓಡಾಡುತ್ತಿರುವುದು ಹಾಗೂ ದಾಳಿ ನಡೆಸಿ, ಜನರನ್ನು ಹಾಗೂ ತೋಟದ ಕೂಲಿ ಕಾರ್ಮಿಕರನ್ನು ಬಲಿ ಪಡೆದಿದೆ. ಈ ಘಟನೆಯಿಂದ ಮಲೆನಾಡಿನಲ್ಲಿ ಜನರು, ಕೂಲಿ ಕಾರ್ಮಿಕರು ಭಯದ ವಾತಾವರಣದಲ್ಲಿ ಬದುಕಬೇಕಾದಂತ ಪರಿಸ್ಥಿತಿ ಎದುರಾಗಿದೆ. ಈ ವಿಚಾರವಾಗಿ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ, ರಾಜ್ಯದ ಅರಣ್ಯ ಸಚಿವರಿಗೆ ಮೃತಪಟ್ಟ ಮನೆಗಳಿಗೆ ಪರಿಹಾರ ಕೊಡುವುದು ಬಿಟ್ಟರೆ, ಬೇರೆ ಪರ್ಯಾಯ ಮಾರ್ಗ ಕಂಡುಕೊಳ್ಳುವುದಲ್ಲಿ ವಿಫಲವಾಗಿದ್ದಾರೆ ಎಂದು ಮಲೆನಾಡಿಗರು ಆಕ್ರೋಶವನ್ನು ಹೊರಹಕಿದ್ದಾರೆ. ಇಂತಹ ಘಟನೆಗಳು ಮುಂದೆ ಆಗದಂತೆ ಸರ್ಕಾರ ಹಾಗೂ ಅರಣ್ಯ ಸಚಿವರು, ಶಾಸಕರು ಕೂಡಲೇ ಗಮನ ತೆಗೆದುಕೊಂಡು ಸಮಸ್ಯೆ ಬಗೆಹರಿಸಬೇಕಾಗಿದೆ.





