ಚೀನಾದ ಹೊಸ ನಕ್ಷೆಯಲ್ಲಿ ಅರುಣಾಚಲ ಪ್ರದೇಶ ಸೇರ್ಪಡೆ: ಭಾರತ ಆಕ್ರೋಶ

Date:

ಚೀನಾ ಮತ್ತೆ ತನ್ನ ಕೆಟ್ಟ ಚಾಳಿ ಪ್ರದರ್ಶಿಸಿದ್ದು, ಭಾರತದ ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರದಂತಹ ಪ್ರದೇಶಗಳನ್ನು ಒಳಗೊಂಡಿರುವ 2023ರ ಅಧಿಕೃತ ಆವೃತ್ತಿಯ ನಕ್ಷೆಯನ್ನು ಬಿಡುಗಡೆ ಮಾಡಿದೆ.

2023ರ ಚೀನಾದ ಅಧಿಕೃತ ನಕ್ಷೆಯನ್ನು ಸೋಮವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ನೈಸರ್ಗಿಕ ಸಂಪನ್ಮೂಲಗಳ ಸಚಿವಾಲಯವು ನಕ್ಷೆಯನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದೆ ಎಂದು ಚೀನಾದ ಗ್ಲೋಬಲ್ ಟೈಮ್ಸ್ ಟ್ವಿಟ್ಟರ್‌ನಲ್ಲಿ ತಿಳಿಸಿದೆ.

ಕಳೆದ ಏಪ್ರಿಲ್‌ನಲ್ಲಿ ಅರುಣಾಚಲ ಪ್ರದೇಶದ 11 ಸ್ಥಳಗಳನ್ನು ಮರುನಾಮಕರಣ ಮಾಡುವ ಚೀನಾದ ಪ್ರಯತ್ನಗಳನ್ನು ಭಾರತ ತಿರಸ್ಕರಿಸಿದ ನಂತರ ಹೊಸ ನಕ್ಷೆಯನ್ನು ಚೀನಾ ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚೀನಾವು ಇಂತಹ ಪ್ರಯತ್ನ ಮಾಡುತ್ತಿರುವುದು ಇದೇ ಮೊದಲಲ್ಲ. ನಾವು ಇದನ್ನು ಖಡಾಖಂಡಿತವಾಗಿ ತಿರಸ್ಕರಿಸುತ್ತೇವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ಅರುಣಾಚಲ ಪ್ರದೇಶವು ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಆವಿಷ್ಕರಿಸಿದ ಹೆಸರುಗಳನ್ನು ನಿಯೋಜಿಸುವ ಪ್ರಯತ್ನಗಳು ನಿಜ ಪರಿಸ್ಥಿತಿಯನ್ನು ಬದಲಾಯಿಸುವುದಿಲ್ಲ” ಎಂದು ಬಾಗ್ಚಿ ಹೇಳಿದ್ದಾರೆ.

ಗ್ಲೋಬಲ್ ಟೈಮ್ಸ್ ಪ್ರದರ್ಶಿಸಿರುವ ನಕ್ಷೆಯಲ್ಲಿ 1962ರ ಯುದ್ಧದಲ್ಲಿ ಭಾರತದಿಂದ ಆಕ್ರಮಿಸಿಕೊಂಡ ಅಕ್ಸಾಯ್ ಚಿನ್ ಪ್ರದೇಶ ಹಾಗೂ ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ ಎಂದು ಚೀನಾ ಹೇಳಿಕೊಂಡಿದೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿ ಸದಾ ಉಳಿಯುತ್ತದೆ ಎಂದು ಭಾರತ ಸರ್ಕಾರ ಒತ್ತಿ ಹೇಳುತ್ತಿರುವಾಗಲೂ ಚೀನಾದ ಈ ಪ್ರಯತ್ನಕ್ಕೆ ಕೈ ಹಾಕಿದೆ.

ಈ ಸುದ್ದಿ ಓದಿದ್ದೀರಾ? ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ ಸಾಧ್ಯತೆ; ಪ್ರಚಾರಕ್ಕೆ ಎಲ್ಲ ಚಾಪರ್‌ಗಳನ್ನು ಬುಕ್‌ ಮಾಡಿರುವ ಬಿಜೆಪಿ

ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ ನಡೆದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಸಂಪೂರ್ಣ ಹದಗೆಟ್ಟಿದೆ. ಇದನ್ನು ಸರಿಪಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್ ಅವರು ದಕ್ಷಿಣ ಆಫ್ರಿಕಾದ ಜೊಹಾನೆಸ್ಬರ್ಗ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತುಕತೆ ನಡೆಸಿದ್ದರು. ಗಡಿಯಲ್ಲಿ ಉದ್ವಿಗ್ನತೆ ಶಮನ ಮತ್ತು ಸೇನಾ ಪಡೆಗಳನ್ನು ಹಿಂಪಡೆಯಲು ಒಪ್ಪಿಗೆ ಸೂಚಿಸಿದ್ದರು.

ಭಾರತ ಮತ್ತು ಚೀನಾದ ಬಾಂಧವ್ಯ ಕಳೆದ ಮೂರು ವರ್ಷಗಳಿಂದ ತೀರ ಹದಗೆಟ್ಟಿದೆ. ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಉದ್ವಿಗ್ನತೆಯಿಂದಾಗಿ ಎಲ್ಲ ಹಂತಗಳಲ್ಲಿ ಸಂಬಂಧಗಳು ಹಳಸಿವೆ. 2020 ರಿಂದ ಪೂರ್ವ ಲಡಾಖ್‌ನಲ್ಲಿನ ಗಡಿ ಸಮಸ್ಯೆಗಳನ್ನು ಪರಿಹರಿಸಲು ಎರಡೂ ಕಡೆಯಿಂದ ಇಲ್ಲಿಯವರೆಗೂ 19 ಸುತ್ತಿನ ಮಾತುಕತೆಗಳನ್ನು ನಡೆಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...