ಭಾರತದ ನೆಲವನ್ನು ಅತಿಕ್ರಮಿಸಿದ ಚೀನಾ; ಪ್ರಧಾನಿ ಮೋದಿ ಮೌನ

Date:

ಪೂರ್ವ ಲಡಾಖ್‌ನಲ್ಲಿ ಚೀನಾ ಸೇನೆಯು ಭಾರತದ ನೆಲವನ್ನು ಅತಿಕ್ರಮಿಸಿದೆ. ಸುಮಾರು 4000 ಚದರ ಕಿ.ಮೀ. ಭೂಮಿಯನ್ನು ಭಾರತವೇ ಚೀನಾಕ್ಕೆ ಬಿಟ್ಟುಕೊಂಟಂತಿದೆ ಎಂಬುದು ಲಡಾಖ್ ನಿವಾಸಿಗಳ ಮತ್ತು ವಿರೋಧ ಪಕ್ಷಗಳ ಆರೋಪವಾಗಿದೆ. ಚೀನಾದ ಅತಿಕ್ರಮಣವನ್ನು ವಿರೋಧಿಸುವ ವಿಚಾರದಲ್ಲಿ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಮೌನವು ಈ ಆರೋಪವನ್ನು ನಿಜವನ್ನಾಗಿಸಿದೆ.

ಲೋಕಸಭೆಯಲ್ಲಿ ಗುರುವಾರ ಶೂನ್ಯ ವೇಳೆ ಸಂದರ್ಭದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಚೀನಾ ಅತಿಕ್ರಮಣ ಮತ್ತು ಅಮೆರಿಕದ ಸುಂಕ ವಿಚಾರದಲ್ಲಿ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಚೀನಾ ಅತಿಕ್ರಮಿಸಿರುವ ಭೂ ಪ್ರದೇಶವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಮತ್ತು ಅಮೆರಿಕ ವಿಧಿಸಿರುವ ಶೇಕಡ 17ರಷ್ಟು ಸುಂಕದ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರತದ ಲಡಾಖ್‌ನಲ್ಲಿ ಚೀನಾ ಬಂಕರ್ ನಿರ್ಮಾಣ – ಮೋದಿ ಮೌನವಾಗಿದ್ದಾರೆ, ಅಂದರೆ…!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದ ಸುಮಾರು 4,000 ಚದರ ಕಿ.ಮೀ. ಪ್ರದೇಶವನ್ನು ಚೀನಾ ಅತಿಕ್ರಮಿಸಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ. ಆದರೂ ವಿದೇಶಾಂಗ ಕಾರ್ಯದರ್ಶಿ ಅವರು ಚೀನಾದ ರಾಯಭಾರಿಯೊಂದಿಗೆ ಕೇಕ್ ಕತ್ತರಿಸಿದ್ದಾರೆ. ಇದು ಆಘಾತಕಾರಿ” ಎಂದು ವಿಪಕ್ಷ ನಾಯಕ ಹೇಳಿದ್ದಾರೆ.

ವಿಪಕ್ಷಗಳು ಮೋದಿ ಸರ್ಕಾರದ ಮೇಲೆ ಈ ಆರೋಪವನ್ನು ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಕೂಡಾ ಹಲವು ಬಾರಿ ವಿಪಕ್ಷಗಳು, ಲಡಾಖ್‌ನ ಹೋರಾಟ ಸಮಿತಿಗಳು ಈ ವಿಚಾರವನ್ನು ಸರ್ಕಾರದ ಮುಂದಿರಿಸಿದೆ. ಆದರೆ ಸರ್ಕಾರ ಮಾತ್ರ ಭಾರತದ ಒಂದಿಂಚ್ಚು ಕೂಡಾ ಚೀನಾ ಒತ್ತುವರಿ ಮಾಡಿಲ್ಲ, ಹಾಗೆ ಮಾಡಲು ನಾವು ಬಿಡುವುದಿಲ್ಲ. ಇವೆಲ್ಲವೂ ವಿಪಕ್ಷಗಳ ಕಟ್ಟುಕಥೆ ಎಂದಿದ್ದಾರೆ. ತಾನು ಅಧಿಕಾರಕ್ಕೆ ಬಂದರೆ ಚೀನಾದ ಅತಿಕ್ರಮಣದ ವಿರುದ್ಧ ದೃಢ ನಿಲುವು ತಾಳುವುದಾಗಿ ಘರ್ಜಿಸಿದ್ದ ಮೋದಿ ಈ ವಿಚಾರದಲ್ಲಿ ಮೌನ ತಾಳಿದ್ದಾರೆ.

2024ರಲ್ಲಿ ಲಡಾಖ್ ಭೂಮಿಯನ್ನು ಚೀನಾ ಸೈನಿಕರು ಅತಿಕ್ರಮಿಸಿರುವುದನ್ನು ಸಾಕ್ಷ್ಯ ಸಮೇತವಾಗಿ ಬಹಿರಂಗಪಡಿಸಲು ಲಡಾಖ್ ಸಾಮಾಜಿಕ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ‘ಗಡಿ ಮೆರವಣಿಗೆ’ ಆಯೋಜಿಸಿದ್ದರು. ಆದರೆ ಈ ಮೆರವಣಿಗೆ ನಡೆಯುವುದಕ್ಕೂ ಒಂದು ದಿನ ಮುಂಚೆಯೇ ಆಡಳಿತವು ನಿಷೇಧಾಜ್ಞೆ ಜಾರಿ ಮಾಡಿತು. ಹೀಗಾಗಿ ಸಂಘಟಕರು ‘ಗಡಿ ಮೆರವಣಿಗೆ’ ವಾಪಸ್ ಪಡೆದರು.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಉಗ್ರ ದಾಳಿ ಬಗ್ಗೆ ಪ್ರಧಾನಿ ಮೋದಿ ‘ಮೌನ’ ಪ್ರಶ್ನಿಸಿದ ರಾಹುಲ್ ಗಾಂಧಿ

ಪೂರ್ವ ಲಡಾಖ್‌ನ ಸುಮಾರು 60,000 ಚದರ ಕಿ.ಮೀ.ಗಿಂತಲೂ ಅಧಿಕ ನೆಲ ತನ್ನದೆಂಬುದು ಚೀನಾ ವಾದ. ಆದರೆ ಅಲ್ಲಿ ಯಾವುದೇ ಅಂತಾರಾಷ್ಟ್ರೀಯ ಗಡಿಯಿಲ್ಲ. 1962ರಲ್ಲಿ ಯುದ್ಧ ನಡೆದ ಬಳಿಕ ಭಾರತ, ಚೀನಾ ಸೇನೆಗಳು ತಾತ್ಕಾಲಿಕ ಕದನ ವಿರಾಮ ರೇಖೆಯನ್ನು (ವಾಸ್ತವ ನಿಯಂತ್ರಣ ರೇಖೆ -ಎಲ್‌ಎಸಿ) ಘೋಷಿಸಿಕೊಂಡಿದೆ. ಆದರೆ 2020ರ ನಂತರ ಚೀನಾ ರೇಖೆಯನ್ನು ಬದಲಾಯಿಸಲು ಯತ್ನಿಸಿದೆ. ಅದರಿಂದಾಗಿ 2020ರ ಮೇ, ಜೂನ್‌, ಅಕ್ಟೋಬರ್‌ನಲ್ಲಿ ಗಾಲ್ವಾನ್, ಪ್ಯಾಂಗ್ಯಾಂಗ್‌ ಬಳಿ ಚೀನಾ- ಭಾರತ ಯೋಧರ ನಡುವೆ ಘರ್ಷಣೆ ನಡೆದಿದೆ. ಭಾರೀ ಪ್ರಮಾಣದಲ್ಲಿ ಸೇನೆಯೂ ಜಮೆಯಾಗಿತ್ತು.

ಮಾತುಕತೆ ಬಳಿಕ ಸೇನೆ ಹಿಂಪಡೆಯಲಾಗಿದೆ. ಆದರೆ ಬಫರ್ ಝೋನ್ ರೂಪಿಸುವ ಚೀನಾದ ಷರತ್ತಿಗೆ ಭಾರತ ಒಪ್ಪಿದೆ. ಅದು ಭಾರತದ ನೆಲದಲ್ಲೇ ಇದೆ. ಈ ಹಿಂದೆ ಭಾರತ ಸೇನೆ ಗಸ್ತು ನಡೆಸುತ್ತಿದ್ದ ಜಾಗ ಇದೀಗ ಚೀನಾ ಸೇನೆಯ ನಿಯಂತ್ರಣದಲ್ಲಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ನಾವು ಯಾವುದೇ ಭೂ ಪ್ರದೇಶ ಬಿಟ್ಟುಕೊಟ್ಟಿಲ್ಲ ಎಂದು ಹೇಳುತ್ತಲೇ ಇದೆ. ಮೋದಿಯೂ ಮೌನವಾಗಿದ್ದಾರೆ. ಈ ಮೌನ ಪ್ರಶ್ನಿಸಿದರೆ, ದೇಶದ್ರೋಹಿ ಎಂಬ ಪಟ್ಟ ಲಭಿಸುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...