ದೇಶಾದ್ಯಂತ ಮತ ಕಳ್ಳತನ ಸುದ್ದಿ ಮಾಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಮತಕಳವು ವಿರೋಧಿ ಅಭಿಯಾನ ಪ್ರಾರಂಭಿಸಿದ್ದು, ಇದರ ಅಂಗವಾಗಿ ಚಿತ್ರದುರ್ಗದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಪೂರ್ವಭಾವಿ ಸಭೆ ನಡೆಸಿದರು.
ಕಾಂಗ್ರೇಸ್ ಪಕ್ಷದ ಕಛೇರಿಯಲ್ಲಿ ನಡೆದ ಮತಗಳವು ವಿರೋಧಿ ಅಭಿಯಾನದ ರೂಪುರೇಷೆಗಳ ಕುರಿತು ನಡೆಸಿದ ಪೂರ್ವಭಾವಿ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಆರ್ ಕೆ ಸರ್ದಾರ್ ಮಾತನಾಡಿ “ಮತ ಕಳ್ಳತನ ತಡೆಗಟ್ಟಬೇಕಿದೆ. ಮತ ನಮ್ಮ ಸಂವಿಧಾನ ನೀಡಿರುವ ಹಕ್ಕು. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿಯವರನ್ನು ನಾವು ಪ್ರಧಾನ ಮಂತ್ರಿ ಸ್ಥಾನದಲ್ಲಿ ಕಾಣಬೇಕು. ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಮಾಡಬೇಕು ಎಂದರೆ ವಿರೋಧಿಗಳ ಮತಕಳವು ತಡೆಯಬೇಕು. ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು” ಅಭಿಪ್ರಾಯಪಟ್ಟರು.
“ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೊಟ್ಟಿರುವ ಗ್ಯಾರಂಟಿ ಯೋಜನೆ ಗಳಿಂದ ಜನರಿಗೆ ಅನುಕೂಲವಾಗಿದೆ. ಅದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು” ಎಂದು ಸಲಹೆ ನೀಡಿದರು.
ಚಿಚಿತ್ರದುರ್ಗ | ಪುನೀತ್ ಸ್ಮರಣಾರ್ಥ ಆರ್ಯ ಈಡಿಗ ಸಂಘದಿಂದ ಪುಷ್ಪನಮನ ಹಾಗೂ ಉಪಹಾರ ವಿತರಣೆ
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಾಜ್ ಪೀರ್, ಕಾರ್ಯಾಧ್ಯಕ್ಷ ಹಾಲೇಶಪ್ಪ, DCC ಕಾರ್ಯದರ್ಶಿ ಸಂಪತ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಗದೀಶ್, ಬ್ಲಾಕ್ ಅಧ್ಯಕ್ಷ ಲಕ್ಷ್ಮೀಕಾಂತ, ಗ್ರಾಮಾಂತರ ಅಧ್ಯಕ್ಷ ಪ್ರಕಾಶ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಣ್ಣ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರ ಉಪಸ್ಥಿತರಿದ್ದರು.





