ರಾಜ್ಯದಲ್ಲಿ ದೇವರಾಜು ಅರಸು ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸವಿ ನೆನಪಿನಲ್ಲಿ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹುಳಿಯಾರು ರಸ್ತೆಯಲ್ಲಿರುವ ಯಾಜ್ಞವಲ್ಯ ವಿದ್ಯಾ ಸಂಸ್ಥೆಯಲ್ಲಿ ಹಿರಿಯೂರಿನ ಶ್ರೀ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಪ್ರಸ್ತುತ ರಾಜಕಾರಣ ಮತ್ತು ಸಿದ್ದರಾಮಯ್ಯ ವಿಚಾರ ಸಂಕಿರಣ ಹಾಗೂ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಹಿರಿಯೂರಿನ ಸಿದ್ದರಾಮಯ್ಯ ಅಭಿಮಾನಿ ಬಳಗವು ಫೆಬ್ರುವರಿ 8ರಂದು ಭಾನುವಾರ ರಕ್ತದಾನ ಶಿಬಿರ ಮತ್ತು “ಪ್ರಸ್ತುತ ರಾಜಕಾರಣ ಹಾಗೂ ಸಿದ್ದರಾಮಯ್ಯ” ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಿದ್ದು, ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಉದ್ಘಾಟಿಸಲಿದ್ದು ಕಾಗಿನೆಲೆ ಕನಕ ಪೀಠದ ಪುರುಷೋತ್ತಮಾನಂದ ಶ್ರೀಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ನೇಕಾರ ಸಮುದಾಯದ ಪ್ರತಿಭಟನೆ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಇನ್ಸೈಟ್ ಸಂಸ್ಥಾಪಕ ನಿರ್ದೇಶಕ ಜಿಬಿ ವಿನಯ್ ಕುಮಾರ್, ಕಾಂಗ್ರೆಸ್ ವಕ್ತಾರ ನಿಖಿತ್ ರಾಜ್ ಮೌರ್ಯ, ಶ್ರೀಮತಿ ಶಶಿಕಲಾ ಸುರೇಶ್ ಬಾಬು, ಸುರೇಶ್, ಮಹಾಂತೇಶ್ ಸೇರಿದಂತೆ ಅಭಿಮಾನಿ ಬಳಗದ ಪದಾಧಿಕಾರಿಗಳು ಸದಸ್ಯರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಕ್ರಮದ ವಿವರಗಳಿಗೆ ಮೊಬೈಲ್ ಸಂಖ್ಯೆ 9740526432, 8105619020, 7892411789, 8050804614 ಸಂಪರ್ಕಿಸಲು ತಿಳಿಸಲಾಗಿದೆ.





