ಚಿತ್ರದುರ್ಗ | ಸರ್ಕಾರದಲ್ಲಿ ಸಮಾಜದ ಲಿಂಗ ವರ್ಗ ಜಾತಿಗಳ ಪ್ರಾತಿನಿಧ್ಯವಿರಬೇಕು; ರಿಷಿಕೇಶ್ ಬಹದ್ದೂರ್ ದೇಸಾಯಿ

Date:

“ಸರ್ಕಾರ ಚುನಾಯಿತವಾಗುವುದು ಜನರಿಂದ. ಹಾಗಾಗಿ ಸರ್ಕಾರಗಳಲ್ಲಿ ಸಮಾಜದ ಎಲ್ಲಾ ಲಿಂಗ ವರ್ಗ ಜಾತಿಗಳ ಪ್ರಾತಿನಿಧ್ಯ ಇರಬೇಕು. ಅದರಂತೆ ಮಾಧ್ಯಮ ಸಂಸ್ಥೆಗಳು ಕೂಡ ಸಮಾಜದ ಎಲ್ಲ ವರ್ಗಗಳ ಪ್ರತಿರೂಪಗೊಳಿಸುತ್ತಿರಬೇಕು. ಅಲ್ಲಿ ಲಿಂಗ ಸಮಾನತೆ ಸಾಮಾಜಿಕ ಸಮಾನತೆಯನ್ನು ಕಾಯ್ದುಕೊಳ್ಳಬೇಕು. ಇದನ್ನು ಅಂಬೇಡ್ಕರ್ ಬಯಸಿದ್ದರು” ಎಂದು ಚಿತ್ರದುರ್ಗದಲ್ಲಿ “ದಿ ಹಿಂದೂ” ಪತ್ರಿಕೆಯ ಸಹಸಂಪಾದಕರಾದ ರಿಷಿಕೇಶ್ ಬಹದ್ದೂರ್ ದೇಸಾಯಿ ಅಭಿಪ್ರಾಯಪಟ್ಟರು.‌

1002606303

ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಎಸ್ಸಿ ಎಸ್ಟಿ ಪತ್ರಿಕಾ ಸಂಪಾದಕರ ಸಂಘ, ಚಿತ್ರದುರ್ಗ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ”ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಚಾರ ಸಂಕಿರಣದಲ್ಲಿ ಪತ್ರಕರ್ತರಲ್ಲಿ ಸಾಮಾಜಿಕ ನ್ಯಾಯದ ಪ್ರಜ್ಞೆ ಕುರಿತು ಮಾತನಾಡಿ “ಪತ್ರಕರ್ತರು ಹೆಚ್ಚು ಹೊಗಳುವವರ ಬಗ್ಗೆ ಜಾಗೃತರಾಗಿರಬೇಕು. ಅಂಬೇಡ್ಕರ್ ವಿಚಾರಧಾರೆಗಳನ್ನು ‘ಸ್ಕೂಲ್ ಆಫ್ ಥಾಟ್ಸ್’ ಎಂದು ಕರೆಯುತ್ತೇವೆ. ಮೀಸಲಾತಿಯ ಬಗ್ಗೆ ಕುರುಡರು ಯಾವುದಾದರೂ ಒಂದು ವಸ್ತುವಿನ ಬಗ್ಗೆ ವಿವರಿಸಿದಂತೆ ನಾವು ಮಾತನಾಡುವುದನ್ನು ಕಾಣುತ್ತೇವೆ. ಎಲ್ಲೆಲ್ಲಿ ಪ್ರಜಾಪ್ರಭುತ್ವ ಇದೆಯೋ ಅಲ್ಲೆಲ್ಲಾ ಮೀಸಲಾತಿ ಇದೆ. ಆದರೆ ಅದರ ಬಗ್ಗೆ ಭಾರತದಲ್ಲಿ ನಕಾರಾತ್ಮಕ ಭಾವನೆಯನ್ನು ರಾಜಕಾರಣಿಗಳು ಮತ್ತು ಕೆಲ ಮೇಲ್ವರ್ಗದವರು ಬೆಳೆಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

IMG 20250831 WA0220
ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ ವಿಚಾರ ಸಂಕಿರಣ

“ಅಂಬೇಡ್ಕರ್ ಭಾರತಕ್ಕೆ ನೀಡಿದ ಸಂವಿಧಾನದಲ್ಲಿ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವ ಈ ಮೂರು ಮುಖ್ಯ ಅಂಶಗಳು. ಅದರಲ್ಲಿ ಸಹೋದರತ್ವ ಇಲ್ಲದಿದ್ದರೆ ಇನ್ನೆರಡು ನಿಷ್ಪ್ರಯೋಜಕ ಎಂದು ಅಂಬೇಡ್ಕರ್ ತಿಳಿಸಿದ್ದರು. ಎಲ್ಲಾ ವರ್ಗದ ಜನರು ಸಹೋದರತ್ವ ಮತ್ತು ಸಮಾನತೆಯನ್ನು ಬೆಳೆಸಿಕೊಂಡರೆ ಸಾಮಾಜಿಕ ನ್ಯಾಯ ಮತ್ತು ಸಮಾಜದ ಸಮಾನತೆಯನ್ನು ಕಾಯ್ದುಕೊಳ್ಳುವ ಸಾಧ್ಯವಾಗುತ್ತದೆ. ಇದು ಮಾಧ್ಯಮ ಸಂಸ್ಥೆಯಲ್ಲಿ ಇರುವವರಿಗೆ ಅತಿ ಹೆಚ್ಚು ಅನ್ವಯಿಸುತ್ತದೆ” ಎಂದು ಮಾರ್ಮಿಕವಾಗಿ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002606305

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಭಾರತದ ಜಾತಿಗಳು ಹೋಮೋಜೀನಿಯಸ್‌ ಅಲ್ಲ, ರೆಟ್ರೋ ಜೀನಿಯಸ್; ಚಿಂತಕ ವಿ ಎಲ್ ನರಸಿಂಹಮೂರ್ತಿ

ವಿಚಾರ ಸಂಕಿರಣದಲ್ಲಿ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ಸದಸ್ಯರಾದ ಅಹೋಬಲಪತಿ, ಮಂಜುನಾಥ್, ನಿಂಗಜ್ಜ, ಶಿವಕುಮಾರ್ ಕಣಸೋಗಿ, ಕಾರ್ಯದರ್ಶಿ ಸಹನಾ, ಟೆಲೆಕ್ಸ್ ಪತ್ರಿಕೆಯ ಸಂಪಾದಕ ರವಿಕುಮಾರ್, ಸಾಮಾಜಿಕ ಚಿಂತಕ ವಿ ಎಲ್ ನರಸಿಂಹಮೂರ್ತಿ, ಡಾ.ಭಾರತೀದೇವಿ, ಚಿತ್ರದುರ್ಗ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಪತ್ರಕರ್ತರಾದ ಮಂಜು ಜಡೇಕುಂಟೆ, ಷಣ್ಮುಖಪ್ಪ, ಗೌನಳ್ಳಿ ಗೋವಿಂದಪ್ಪ, ವೀರೇಶ್, ಶ್ರೀನಿವಾಸ್ ದೊಡ್ಡೇರಿ, ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...