ಚಿತ್ರನಗರಿ ನಿರ್ಮಾಣ | ವಾರ್ತಾ ಇಲಾಖೆಗೆ 11೦ ಎಕರೆ ಭೂಮಿ ಹಸ್ತಾಂತರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಯಿತು.

ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸಲು ಸೂಚಿಸಿದರು. ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಲು ಅಧಿಕಾರಿಗಳಿಗೆ ಸಿಎಂ ತಿಳಿಸಿದರು.

“ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು. 2015-16 ರಲ್ಲಿ ಆಯವ್ಯಯ ಘೋಷಣೆ ಮಾಡಲಾಗಿತ್ತು. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ ಮಾಡಲು ಟೆಂಡರ್‌ ಕರೆಯುವಂತೆ” ಸಿದ್ದರಾಮಯ್ಯ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದ ನಂತರ ಪಿಪಿಪಿ ಮಾದರಿಯಲ್ಲಿ ಎಕ್ಸ್‌ಪ್ರೆಷನ್‌ ಆಫ್‌ ಇಂಟರೆಸ್ಟ್ ಕರೆಯಲು ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

“ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಿಸಲು ಸೂಚಿಸಿದರು. ಚಿತ್ರನಗರಿಯಲ್ಲಿ ಥಿಯೇಟರ್‌, ಸ್ಟುಡಿಯೋ, ಮಲ್ಟಿಪ್ಲೆಕ್ಸ್‌, ಥೀಮ್‌ ಪಾರ್ಕ್‌, ಹೋಟೆಲ್‌ ನಿರ್ಮಿಸಬೇಕು” ಎಂದು ಸಿಎಂ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋಶಾ ಮಸಲತ್ತು-ಕೇಜ್ರೀವಾಲ್ ಸವಾಲು

“ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕವಾದ ನಂತರ ಚಿತ್ರರಂಗದ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ, ಚಿತ್ರನಗರಿಯ ರೂಪುರೇಷೆ ಅಂತಿಮಗೊಳಿಸಬೇಕು. ಇದರಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯುತ್ತದೆ” ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್‌ ಚಂದ್ರ, ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...