ಬಿಹಾರ ಚುನಾವಣೆ | ನಾಗರಿಕರಿಗೆ ನಿಷ್ಪಕ್ಷಪಾತ ಚುನಾವಣಾ ಆಯೋಗ ಬೇಕಿದೆ: ಎಂ ಕೆ ಸ್ಟಾಲಿನ್

Date:

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಪಡೆದಿದ್ದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶನಿವಾರ ಜೆಡಿಯು ನಾಯಕ ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿದರು. ಜತೆಗೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಅನ್ನು ಸ್ಟಾಲಿನ್ ಟೀಕಿಸಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್ ಅವರು, “ಬಿಹಾರ ಚುನಾವಣೆಯ ಫಲಿತಾಂಶವು ಭಾರತೀಯ ಚುನಾವಣಾ ಆಯೋಗದ ದುಷ್ಕೃತ್ಯಗಳನ್ನು, ಅಜಾಗರೂಕ ಕ್ರಮಗಳನ್ನು ಮರೆಮಾಚಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣಾ ಆಯೋಗದ ಖ್ಯಾತಿ ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ. ಈ ದೇಶದ ನಾಗರಿಕರು ಬಲವಾದ ಮತ್ತು ಹೆಚ್ಚು ನಿಷ್ಪಕ್ಷಪಾತ ಚುನಾವಣಾ ಆಯೋಗಕ್ಕೆ ಅರ್ಹರು. ಚುನಾವಣಾ ಆಯೋಗದ ನೀತಿ ಸಂಹಿತೆಯು ಚುನಾವಣೆಯಲ್ಲಿ ಗೆಲ್ಲದವರಲ್ಲಿಯೂ ಸಹ ವಿಶ್ವಾಸವನ್ನು ಪ್ರೇರೇಪಿಸಬೇಕು” ಎಂದು ಸ್ಟಾಲಿನ್ ಅಭಿಪ್ರಾಯಿಸಿದ್ದಾರೆ.

ಇನ್ನು ಬಿಹಾರದಲ್ಲಿ ವಿರೋಧ ಪಕ್ಷಗಳ ಮಹಾಘಟಬಂಧನ್ ಮೈತ್ರಿಕೂಟದ ಬಗ್ಗೆ ಮಾತನಾಡಿದ ಸ್ಟಾಲಿನ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಮತ್ತು ಇತರ ಮೈತ್ರಿಕೂಟದ ನಾಯಕರ ದಣಿವರಿಯದ ಪ್ರಚಾರವನ್ನು ಶ್ಲಾಘಿಸಿದರು.

“ಚುನಾವಣಾ ಫಲಿತಾಂಶಗಳು ಕಲ್ಯಾಣ ಕಾರ್ಯಕ್ರಮಗಳು, ಸಾಮಾಜಿಕ ಮತ್ತು ಸೈದ್ಧಾಂತಿಕ ಒಕ್ಕೂಟಗಳು, ಸ್ಪಷ್ಟ ರಾಜಕೀಯ ಸಂದೇಶ ಮತ್ತು ಕೊನೆಯ ಮತದಾನದವರೆಗೆ ಸಮರ್ಪಿತ ನಿರ್ವಹಣೆಯನ್ನು ಪ್ರತಿಬಿಂಬಿಸುತ್ತವೆ. ಇಂಡಿಯಾ ಒಕ್ಕೂಟದ ನಾಯಕರು ಅನುಭವಿ ರಾಜಕಾರಣಿಗಳಾಗಿದ್ದು, ಮುಂದಿನ ಸವಾಲುಗಳನ್ನು ಎದುರಿಸಲು ಕಾರ್ಯತಂತ್ರ ರೂಪಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ” ಎಂದೂ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...