ಬೆಳಗಾವಿ | ಪೌರ ಕಾರ್ಮಿಕರಾಗಿದ್ದ ಮಹಿಳೆ ಈಗ ಪಾಲಿಕೆ ಮೇಯರ್

Date:

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ, ಈಗ ಅದೇ ಪಾಲಿಕೆಯಲ್ಲಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಪಾಲಿಕೆಯಲ್ಲಿ ಬಿಜೆಪಿ ಸದಸ್ಯೆಯಾಗಿದ್ದ ಸವಿತಾ ಕಾಂಬಳೆ ಅವರು ಮೇಯರ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಗುರುವಾರ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಪಾಲಿಕೆಯ ಅಧಿಕಾರದ ಗದ್ದುಗೆಯನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿಯ ಸವಿತಾ ಕಾಂಬಳೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ, ಮರಾಠ ಸಮುದಾಯದ ಆನಂದ್ ಚವ್ಹಾಣ್ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಕನ್ನಡತಿಗೆ ಮೇಯರ್, ಮರಾಠಿಗನನ್ನು ಉಪಮೇಯರ್ ಆಗಿ ಆಯ್ಕೆ ಮಾಡಿರುವ ಬಿಜೆಪಿ, ಎರಡೂ ಭಾಷಿಗರ ಓಲೈಕೆಯನ್ನೂ ಮಾಡಿದೆ ಎಂದು ಹೇಳಲಾಗುತ್ತಿದೆ.

ಕೆಲ ವರ್ಷಗಳ ಹಿಂದೆ ಸಂವಿತಾ ಕಾಂಬಳೆ ಅವರು ಬೆಳಗಾವಿ ಪಾಲಿಕೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದರು. 2021ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಪಾಲಿಕೆ ಸದಸ್ಯಯಾಗಿ ಆಯ್ಕೆಯಾಗಿದ್ದರು. ಈಗ, ಮೇಯರ್ ಆಗಿಯೂ ಅಧಿಕಾರ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ʼನಾವೇ ಮೂಲ ಅಹಿಂದರುʼ ಎಂಬ ಸತ್ಯದ ಅರಿವು ಲಿಂಗಾಯತರಿಗೆ ಆಗಬೇಕಿದೆ

2023ರ ಫೆಬ್ರವರಿಯಿಂದ 2024ರ ಫೆಬ್ರವರಿವರೆಗೆ ಬಿಜೆಪಿಯ ಶೋಭಾ ಸೋಮನಾಚೆ ಮೇಯರ್ ಆಗಿದ್ದರು. ರೇಷ್ಮಾ ಪಾಟೀಲ ಉಪಮೇಯರ್ ಆಗಿದ್ದರು. ಅವರ ಅಧಿಕಾರಾವಧಿ ಮುಗಿದ್ದರಿಂದ ಗುರುವಾರ ಮೇಯರ್-ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...