ಲಕ್ನೋ| ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ, ಎಸ್‌ಪಿ ಕಾರ್ಯಕರ್ತರ ನಡುವೆ ಘರ್ಷಣೆ

Date:

ಉತ್ತರ ಪ್ರದೇಶದ ಲಕ್ನೋದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಕಾರ್ಯಕರ್ತರ ನಡುವೆ ಮಂಗಳವಾರ ಘರ್ಷಣೆ ಉಂಟಾಗಿದ್ದು ಹಲವರು ತೀವ್ರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ಲಕ್ನೋದ ರಮಾಬಾಯಿ ಅಂಬೇಡ್ಕರ್ ಬೂತ್‌ನ ಹೊರಗೆ ಮಾರಾಮಾರಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘರ್ಷಣೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸುಡು ಬಿಸಿಲಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮತ ಎಣಿಕೆ ಬೂತ್‌ನ ಹೊರಗೆ ಘರ್ಷಣೆ ನಡೆದಿರುವುದು ಕಂಡುಬಂದಿದೆ.

ಇದನ್ನು ಓದಿದ್ದೀರಾ?  10 ರಾಜ್ಯಗಳಲ್ಲಿ ಬಿಜೆಪಿ ‘ಶೂನ್ಯ’ ಸಾಧನೆ

ಆರಂಭದಲ್ಲಿ ಉಭಯ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು ಬಳಿಕ ಅದು ಹಿಂಸಾಚಾರಕ್ಕೆ ತಿರುಗಿದೆ. ಘರ್ಷಣೆಯಲ್ಲಿ ಸಮಾಜವಾದಿ ಪಕ್ಷದ ಒಬ್ಬ ಕಾರ್ಯಕರ್ತನ ತಲೆಗೆ ತೀವ್ರ ಏಟಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಘರ್ಷಣೆಯನ್ನು ತಡೆದಿದ್ದಾರೆ. ನಂತರ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಮತದಾನ ಕೇಂದ್ರದ ಹೊರಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಭಾರೀ ಮುಖಭಂಗವಾಗಿದ್ದು, ಇಂಡಿಯಾ ಒಕ್ಕೂಟ 44 ಲೋಕಸಭಾ ಸ್ಥಾನಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಸಮಾಜವಾದಿ ಪಕ್ಷ 37, ಕಾಂಗ್ರೆಸ್ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...