ಮಧ್ಯ ಪ್ರದೇಶ | ಅಂಬೇಡ್ಕರ್ – ಪಟೇಲ್ ಪ್ರತಿಮೆ ವಿವಾದ: ದಲಿತರು-ಪಾಟೀದಾರ್ ಸಮುದಾಯಗಳ ನಡುವೆ ಘರ್ಷಣೆ

Date:

ವಿವಾದಿತ ಸ್ಥಳವೊಂದರಲ್ಲಿ ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ನಿರ್ಮಿಸುವ ವಿಚಾರದಲ್ಲಿ ದಲಿತರು ಹಾಗೂ ಪಾಟೀದಾರ್ ಸಮುದಾಯದ ನಡುವೆ ಘರ್ಷಣೆ ಉಂಟಾಗಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ವಿವಾದಿತ ಸ್ಥಳದಲ್ಲಿ ಪಾಟೀದಾರ್ ಸಮುದಾಯದ ಗುಂಪು ಬುಧವಾರ ರಾತ್ರಿ ಸರ್ದಾರ್ ಪಟೇಲ್ ಅವರ ವಿಗ್ರಹವನ್ನು ಪ್ರತಿಷ್ಠಾಪಿಸಿದ್ದರು. ಗುರುವಾರ ಬೆಳಗ್ಗೆ ಇದು ಗಮನಕ್ಕೆ ಬರುತ್ತಿದ್ದಂತೆಯೇ ಒಂದುಗೂಡಿದ ದಲಿತ ಸಮುದಾಯದವರು ಟ್ರ್ಯಾಕ್ಟರ್‌ ಬಳಸಿ ಪ್ರತಿಮೆ ಉರುಳಿಸಿದ್ದಾರೆ.

ಇದೇ ಸ್ಥಳದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ದಲಿತರು ಒತ್ತಾಯಿಸಿದ್ದರು. ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಆಡಳಿತ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಪಾಟೀದಾರರು ಸರ್ದಾರ್ ಪಟೇಲ್ ಪ್ರತಿಮೆಯನ್ನು ನಿರ್ಮಿಸಲು ಬಯಸಿದ್ದರು. ಈ ವಿವಾದದ ನಡುವೆಯೇ ಪಟೇಲ್ ಪ್ರತಿಮೆಯನ್ನು ಕೆಲವುರ ರಾತ್ರೋರಾತ್ರಿ ತಂದು ನಿಲ್ಲಿಸಿದ್ದರಿಂದ ದಲಿತ ಸಮುದಾಯದ ಮಂದಿ ಆಕ್ರೋಶಗೊಂಡು, ಈ ಕೃತ್ಯ ಎಸಗಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ರ್ಯಾಕ್ಟರ್‌ ಬಳಸಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಉರುಳಿಸಿ, ಆ ಬಳಿಕ ಕಲ್ಲೆಸೆಯುತ್ತಿರುವ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗುಂಪನ್ನು ಚದುರಿಸಿದ್ದಾರೆ. ಪ್ರತಿಮೆ ಪ್ರತಿಪ್ಠಾಪನೆಯ ವಿಚಾರವಾಗಿ ಸ್ಥಳೀಯ ಪಂಚಾಯತ್ ಜೊತೆಗೆ ಚರ್ಚಿಸಲಾಗುತ್ತಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ನೀಡಿರುವ ಉಜ್ಜಯಿನಿ ಪೊಲೀಸ್ ಅಧೀಕ್ಷಕ ಸಚಿನ್ ಶರ್ಮಾ, “ಈ ಘಟನೆಯು ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ದೂರದಲ್ಲಿರುವ ಮಕ್ಡೋನ್ ಪ್ರದೇಶದಲ್ಲಿ ನಡೆದಿದೆ. ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿ ವಿವಾದ ಉಂಟಾಗಿದೆ. ಪೊಲೀಸ್ ಪಡೆಗಳು ಸ್ಥಳದಲ್ಲಿದ್ದು, ಸದ್ಯ ಶಾಂತಿ ನೆಲೆಸಿದೆ. ವೀಡಿಯೋದಲ್ಲಿ ಟ್ರ್ಯಾಕ್ಟರ್ ಮೂಲಕ ಪ್ರತಿಮೆ ಉರುಳಿಸಿದ್ದ ಓರ್ವ ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ವೀಡಿಯೊದಲ್ಲಿ ಕಂಡುಬಂದಿರುವ ಮಹಿಳೆಯರನ್ನು ಬಂಧಿಸಲಾಗಿಲ್ಲ. ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...