ಉಡುಪು ಅವರವರ ಇಷ್ಟ; ಹಿಜಾಬ್ ನಿಷೇಧ ವಾಪಸ್ ತಗೋತೇವೆ: ಸಿಎಂ ಸಿದ್ದರಾಮಯ್ಯ

Date:

ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭ ಇಡೀ ದೇಶಾದ್ಯಂತ ಸುದ್ದಿಯಾಗಿದ್ದ ಹಿಜಾಬ್ ನಿಷೇಧ ವಿಚಾರದ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ವೇಳೆ ಅವರು ಈ ಮಹತ್ವದ ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ 34

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬಟ್ಟೆ ಹಾಕೋದು, ಊಟ ಮಾಡೋದು, ಅವರವರಿಗೆ ಬಿಟ್ಟ ವಿಚಾರ. ಅದನ್ನು ನಾನ್ಯಾಕೆ ಅಡ್ಡಿಪಡಿಸಲಿ. ನಾನು ಧೋತಿ ಮತ್ತು ಜುಬ್ಬಾ ಹಾಕಿಕೊಳ್ಳುತ್ತೇನೆ. ಅದು ನನ್ನ ಇಷ್ಟ. ಇನ್ನೊಬ್ಬ ಪ್ಯಾಂಟು-ಶರ್ಟ್‌ ಹಾಕಿಕೊಳ್ಳುತ್ತಾನೆ. ಅದು ಅವನ ಇಷ್ಟ. ಅದರಲ್ಲಿ ತಪ್ಪೇನಿದೆ? ಹಿಜಾಬ್ ನಿಷೇಧದ ಆದೇಶ ವಾಪಸ್ ತಗೊಳ್ಳಿ ಎಂದು ತಿಳಿಸಿದ್ದೇನೆ. ನಮ್ಮ ಸರ್ಕಾರವು ಎಲ್ಲ ಬಡವರು, ಅಲ್ಪಸಂಖ್ಯಾತರು, ದಲಿತರಿಗೆ ನ್ಯಾಯ ನೀಡಲು ಶ್ರಮಿಸುತ್ತಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

“ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಕೇವಲ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೀತಿಲ್ವಾ?
ನಾವು ಎಲ್ಲ ಜಾತಿ, ಎಲ್ಲ ಧರ್ಮದವರಿಗೆ ಮಾತ್ರವಲ್ಲ ಎಲ್ಲ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಬಿಜೆಪಿಯವರು 10 ಕೆಜಿ ಅಕ್ಕಿ ಪಡೆಯುತ್ತಿಲ್ಲವಾ? ಬಿಜೆಪಿಯವರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ? ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷ್ಮಿಯ ಹಣ ಪಡೆಯುತ್ತಿಲ್ಲವೇ ? ನಮ್ಮ ಗ್ಯಾರಂಟಿ ಸ್ಕೀಂಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, “ಸುಳ್ಳು ಹೇಳುವವರ, ನಮ್ಮ ಸರ್ಕಾರದ ಲಾಭ ಪಡೆದೂ ನಕ್ರಾ ಆಡುವವರ ಜತೆ ಹೋಗಬೇಡಿ. ನಿಮ್ಮ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಸದಾ ಇರಲಿ” ಎಂದು ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...