ನಿರ್ಮಲಾ ಸೀತಾರಾಮನ್‌ ವಿರುದ್ಧ ಸಿಎಂ ಅವರೇ‌ ಬೇರೆ ವ್ಯಕ್ತಿಯಿಂದ ದೂರು ದಾಖಲಿಸಿದ್ದಾರೆ: ‌ಆರ್ ಅಶೋಕ್

Date:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ‌ ಪಿ ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ ಪಕ್ಷಕ್ಕೂ 1,200 ಕೋಟಿ ರೂ. ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ” ಎಂದರು.

“ಎಲ್ಲ ಪಕ್ಷಗಳು ದೇಣಿಗೆ ಸಂಗ್ರಹ ಮಾಡಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್‌ಐಆರ್‌ ದಾಖಲಿಸುವುದಾದರೆ, ಎಲ್ಲರ ಮೇಲೂ ದಾಖಲಿಸಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ ಯಾರಿಂದಲೋ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗೆ ದೂರು ದಾಖಲಿಸಿರುವುದು ರಾಜಕೀಯ ಪ್ರೇರಿತ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡುತ್ತಿದ್ದಾರೆ. ಮೊದಲು ಲೋಕಾಯುಕ್ತ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದರು. ಈಗ ಸಿಬಿಐ ಅಧಿಕಾರ ಕಿತ್ತುಕೊಳ್ಳಲು ಕ್ರಮ ವಹಿಸಿದ್ದಾರೆ. ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಅನೇಕ ಹಗರಣಗಳನ್ನು ಮಾಡಿ ನುಂಗಿ ನೀರು ಕುಡಿದಿದ್ದರು” ಎಂದು ಕಿಡಿಕಾರಿದರು.

“ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದರೆ, ಅವರು ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಅದಕ್ಕಾಗಿ ರಾಜೀನಾಮೆ ನೀಡಲು ಆಗ್ರಹಿಸುತ್ತಿದ್ದೇವೆ. ಆದರೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೂ ರಾಜ್ಯ ಪೊಲೀಸರಿಗೂ ಸಂಬಂಧವಿಲ್ಲ. ಕುಮಾರಸ್ವಾಮಿ ಅಧಿಕಾರ ದುರ್ಬಳಕೆ ಮಾಡಲು ಆಗುವುದಿಲ್ಲ. ಯಾವ್ಯಾವುದೋ ಪ್ರಕರಣಕ್ಕೆ ಮುಡಾ ಹಗರಣವನ್ನು ಹೋಲಿಸುವುದು ಬೇಡ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...