ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ ಎಂ ಇಬ್ರಾಹಿಂ ಉಚ್ಚಾಟನೆ

Date:

ಬಿಜೆಪಿಯೊಂದಿಗೆ ಮೈತ್ರಿ ಮಾಡಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಅವರನ್ನೇ ಉಚ್ಚಾಟನೆ ಮಾಡುವುದಾಗಿ ತಿಳಿಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ.

ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ‘ಪಕ್ಷದ ನಿಯಾವಳಿಗಳ ಪ್ರಕಾರ ಕೋರ್ ಕಮಿಟಿ ಸಭೆಯಲ್ಲಿ ಅಂತಿಮ ನಿರ್ಧಾರ ಮಾಡಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿದ್ದೇವೆ. ಪಕ್ಷದ ಮುಂದಿನ ಅಡ್‌ಹಾಕ್ ಅಧ್ಯಕ್ಷರಾಗಿ ಎಚ್ ಡಿ ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ’ ಎಂದು ತಿಳಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ವಿಚಾರದಲ್ಲಿ ಎರಡು ಬಾರಿ ಸಭೆ ನಡೆಸಲಾಗಿತ್ತು. ಅದರಂತೆ ನಿರ್ಧಾರ ಕೈಗೊಂಡಿದ್ದೇವೆ. ಈ ವಿಚಾರದಲ್ಲಿ ಪರಿಷತ್ ಸದಸ್ಯ ಬಿ ಎಂ ಫಾರೂಕ್ ಸಹಿತ ಅನೇಕ ಜನ ಪಕ್ಷದ ಮುಸ್ಲಿಂ ಮುಖಂಡರು ಇದಕ್ಕೆ ಬೆಂಬಲ ಸೂಚಿಸಿದ್ದಾರೆ. ಮೈತ್ರಿ ವಿಚಾರವಾಗಿ ಸಿ ಎಂ ಇಬ್ರಾಹಿಂ ನೀಡಿರುವ ಹೇಳಿಕೆಯನ್ನು ಇಲ್ಲಿ ಪ್ರಸ್ತಾಪ ಮಾಡುವುದಿಲ್ಲ ಎಂದು ಎಚ್ ಡಿ ದೇವೇಗೌಡ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...