ಅಂಕಿತಾ ಸಾಧನೆಗೆ ಸಿಎಂ ಹರ್ಷ; ವಸತಿ ಶಾಲೆಗಳ ಮಕ್ಕಳು ಇನ್ನಷ್ಟು ರ್‍ಯಾಂಕ್‌ ಪಡೆಯಲಿ: ಸಿದ್ದರಾಮಯ್ಯ

Date:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್‍ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, “ಈ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್‍ಯಾಂಕ್‌ ಪಡೆಯಬೇಕು; ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು” ಎಂದು ಆಶಿಸಿದರು.

ಮೈಸೂರಿನಲ್ಲಿ ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, “ಅಂಕಿತಾಳ ಸಾಧನೆ ಹರ್ಷ ತಂದಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದು” ಎಂದರು.

“1994ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನ ಪಡೆದಿದೆ. ಈ ಬಾರಿ ಐದರೊಳಗೆ ಬರಬೇಕು ಎಂದು ಸೂಚಿಸಿದ್ದೆ. ಏಳನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ಈ ಗುರಿ ಸಾಧಿಸುವಂತೆ ತಿಳಿಸಲಾಗುವುದು” ಎಂದರು.

ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುವುದಿಲ್ಲ. ಈ ಕಾರಣಕ್ಕೆ ಬಸವಣ್ಣನವರ ಮೂರ್ತಿಗೆ ಹಾರ ಹಾಕಿ, ಅವರನ್ನು ಸ್ಮರಿಸುತ್ತಾ, ಅವರ ವಿಚಾರಗಳನ್ನು ಸ್ಮರಿಸಿ, ಆ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...