ಬೆಂಗಳೂರಿನ ಅತ್ತಿಬೆಲೆಯಲ್ಲಿ ಕಳೆದ ಶನಿವಾರ ನಡೆದ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉನ್ನತಮಟ್ಟದ ಸಭೆ ನಡೆಸಿದ್ದು, ರಾಜ್ಯಾದ್ಯಂತ ಪ್ರತಿಯೊಂದು ಪಟಾಕಿ ಲೈಸೆನ್ಸ್ದಾರರ ಸ್ಥಳ ಪರಿಶೀಲನೆ ನಡೆಸಲು ಖಡಕ್ ಸೂಚನೆ ನೀಡಿದ್ದಾರೆ.
ಅತ್ತಿಬೆಲೆ ಘಟನೆಯನ್ನು ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ಇರುವ ಪ್ರತಿಯೊಂದು ಪಟಾಕಿ ಲೈಸೆನ್ಸ್ದಾರರ ಸ್ಥಳ ಪರಿಶೀಲನೆ ನಡೆಸಬೇಕು. ಲೋಪಗಳಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ @siddaramaiah ಅವರು ಇಂದು ಹಿರಿಯ ಅಧಿಕಾರಿಗೊಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು:
ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.
ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು… pic.twitter.com/ko3ZQlsAyr— CM of Karnataka (@CMofKarnataka) October 10, 2023
ಎಕ್ಸ್ಪ್ಲೋಸಿವ್ ಕಾಯ್ದೆಯ ಪ್ರಕಾರ ಲೈಸೆನ್ಸ್ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವಕ್ಕೆ ಯಾರು ಹೊಣೆಗಾರರು. ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದು ತಾಕೀತು ಮಾಡಿದರು.
ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್, ಅಗ್ನಿಶಾಮಕ, ಟ್ರಾಫಿಕ್ ಮತ್ತು ಕಾನೂನು-ಸುವ್ಯವಸ್ಥೆ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್ ನೀಡಲಾಗುತ್ತದೆ. ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸೂಚಿಸಿದರು. ರಾಜ್ಯಕ್ಕೆ ಅನ್ವಯಿಸುವ ನಿಯಮ ಬದಲಿಸಲು ಸೂಚಿಸಿದರು.
ತಹಶೀಲ್ದಾರ್ ಸೇರಿ ಮೂವರು ಅಧಿಕಾರಿಗಳ ಅಮಾನತು
ಅತ್ತಿಬೆಲೆ ಪ್ರಕರಣದಲ್ಲಿ ನಿಗದಿಪಡಿಸಲಾದ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ ಸರ್ಕಲ್ ಇನ್ಸ್ಪೆಕ್ಟರ್, ತಹಸೀಲ್ದಾರ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಲು ಇದೇ ವೇಳೆ ಸಿಎಂ ಸೂಚಿಸಿದರು.
ಅತ್ತಿಬೆಲೆಯಲ್ಲಿರುವ ಎಲ್ಲ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಲು ಸೂಚಿಸಿದರು. ಇನ್ನು ಮುಂದೆ ಲೈಸನ್ಸ್ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು ಎಂದ ಸೂಚನೆ ನೀಡಿದರು.
ಅತ್ತಿಬೆಲೆ ಪಟಾಕಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಇಂತಹ ಅವಘಡಗಳು ರಾಜ್ಯದಲ್ಲಿ ಮತ್ತೆ ಮರುಕಳಿಸದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳೊಂದಿಗೆ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದೆ.
ರಾಜ್ಯಾದ್ಯಂತ ಅನುಮತಿ ಪಡೆದಿರುವ ಪಟಾಕಿ… pic.twitter.com/9K4Slw2k9V— DK Shivakumar (@DKShivakumar) October 10, 2023
ಸಭೆಯಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ರಾಜಕೀಯ ಸಮಾವೇಶಗಳಲ್ಲಿ ಹಾಗೂ ವಿವಾಹ ಸಮಾರಂಭಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಜಿಪಿ ಅಲೋಕ್ ಮೋಹನ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.





