ಪ್ರತಿಯೊಂದು ಪಟಾಕಿ ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Date:

ಬೆಂಗಳೂರಿನ ಅತ್ತಿಬೆಲೆಯಲ್ಲಿ ಕಳೆದ ಶನಿವಾರ ನಡೆದ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉನ್ನತಮಟ್ಟದ ಸಭೆ ನಡೆಸಿದ್ದು, ರಾಜ್ಯಾದ್ಯಂತ ಪ್ರತಿಯೊಂದು ಪಟಾಕಿ ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಲು ಖಡಕ್ ಸೂಚನೆ ನೀಡಿದ್ದಾರೆ.

ಅತ್ತಿಬೆಲೆ ಘಟನೆಯನ್ನು ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ಇರುವ ಪ್ರತಿಯೊಂದು ಪಟಾಕಿ ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಬೇಕು. ಲೋಪಗಳಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಕ್ಸ್‌ಪ್ಲೋಸಿವ್‌ ಕಾಯ್ದೆಯ ಪ್ರಕಾರ ಲೈಸೆನ್ಸ್‌ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವಕ್ಕೆ ಯಾರು ಹೊಣೆಗಾರರು. ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದು ತಾಕೀತು ಮಾಡಿದರು.

ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್‌, ಅಗ್ನಿಶಾಮಕ, ಟ್ರಾಫಿಕ್‌ ಮತ್ತು ಕಾನೂನು-ಸುವ್ಯವಸ್ಥೆ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್‌ ನೀಡಲಾಗುತ್ತದೆ. ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸೂಚಿಸಿದರು. ರಾಜ್ಯಕ್ಕೆ ಅನ್ವಯಿಸುವ ನಿಯಮ ಬದಲಿಸಲು ಸೂಚಿಸಿದರು.

ತಹಶೀಲ್ದಾರ್‌ ಸೇರಿ ಮೂವರು ಅಧಿಕಾರಿಗಳ ಅಮಾನತು

ಅತ್ತಿಬೆಲೆ ಪ್ರಕರಣದಲ್ಲಿ ನಿಗದಿಪಡಿಸಲಾದ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ ಸರ್ಕಲ್‌ ಇನ್ಸ್‌ಪೆಕ್ಟರ್‌, ತಹಸೀಲ್ದಾರ್‌, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಲು ಇದೇ ವೇಳೆ ಸಿಎಂ ಸೂಚಿಸಿದರು.

ಅತ್ತಿಬೆಲೆಯಲ್ಲಿರುವ ಎಲ್ಲ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಲು ಸೂಚಿಸಿದರು. ಇನ್ನು ಮುಂದೆ ಲೈಸನ್ಸ್‌ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್‌ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು ಎಂದ ಸೂಚನೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿ, ರಾಜಕೀಯ ಸಮಾವೇಶಗಳಲ್ಲಿ ಹಾಗೂ ವಿವಾಹ ಸಮಾರಂಭಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಡಿಜಿಪಿ ಅಲೋಕ್‌ ಮೋಹನ್‌, ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್‌ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...