ಕೇರಳ ಸಿಎಂಗೆ ಅನಾರೋಗ್ಯ; 6 ದಿನ ಅಧಿಕೃತ ಕಾರ್ಯಕ್ರಮಗಳು ರದ್ದು  

Date:

ಅನಾರೋಗ್ಯದ ಹಿನ್ನಲೆಯಲ್ಲಿ ಜೂನ್ 27 ರವರೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಮುಖ್ಯಮಂತ್ರಿ ಕಚೇರಿ ಗುರುವಾರ ತಿಳಿಸಿದೆ.

ಪಿಣರಾಯಿ ವಿಜಯನ್ ಅವರು 12 ದಿನಗಳ ಅಮೆರಿಕ, ಕ್ಯೂಬಾ ಮತ್ತು ಯುಎಇ ಪ್ರವಾಸ ಮುಗಿಸಿ ಮಂಗಳವಾರ ರಾಜ್ಯಕ್ಕೆ ವಾಪಸಾದ ನಂತರ ಅಸ್ವಸ್ಥಗೊಂಡ ಅವರನ್ನು ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ.

ತಮ್ಮ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನ್ಯೂಯಾರ್ಕ್‌ನ ಲೋಕ ಕೇರಳ ಸಭಾದ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ವಿಶ್ವ ಬ್ಯಾಂಕ್ ಅಧಿಕಾರಿಗಳನ್ನು ಭೇಟಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೋದಿಗೆ ಭಾರತದಲ್ಲಿ ಪತ್ರಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸಲು ಹೇಳಿ: ಬೈಡನ್‌ಗೆ ಸಿಪಿಜೆ ಒತ್ತಾಯ

ಅಮೆರಿಕ ಭೇಟಿಯ ನಂತರ ಮುಖ್ಯಮಂತ್ರಿ ನೇತೃತ್ವದ ನಿಯೋಗವು ಕ್ಯೂಬಾಕ್ಕೆ ತೆರಳಿತ್ತು. ಅಲ್ಲಿ ಅವರು ಕ್ಯೂಬಾದ ಅಧ್ಯಕ್ಷ ಮಿಗುಯೆಲ್ ಡಯಾಜ್-ಕನೆಲ್ ಅವರನ್ನು ಭೇಟಿಯಾಗಿದ್ದರು.

ಸಚಿವರಾದ ಕೆ ಎನ್ ಬಾಲಗೋಪಾಲ್, ವೀಣಾ ಜಾರ್ಜ್, ಯೋಜನಾ ಮಂಡಳಿ ಉಪಾಧ್ಯಕ್ಷ ವಿ ಕೆ ರಾಮಚಂದ್ರನ್, ಸಂಸದ ಜಾನ್ ಬ್ರಿಟ್ಟಾಸ್, ಮುಖ್ಯ ಕಾರ್ಯದರ್ಶಿ ವಿ ಪಿ ಜಾಯ್, ದೆಹಲಿಯ ರಾಜ್ಯ ಸರ್ಕಾರದ ವಿಶೇಷ ಕರ್ತವ್ಯಾಧಿಕಾರಿ ವೇಣು ರಾಜಾಮೋನಿ, ಆರೋಗ್ಯ ಕಾರ್ಯದರ್ಶಿ ಎಪಿಎಂ ಮಹಮ್ಮದ್ ಹನೀಷ್ ಅವರು ಸಿಎಂ ಪಿಣರಾಯಿ ನೇತೃತ್ವದಲ್ಲಿ ಜತೆಗಿದ್ದರು.

ಪ್ರವಾಸದ ಅಂತಿಮ ಹಂತದಲ್ಲಿ, ಕೇರಳ ಸ್ಟಾರ್ಟ್ಅಪ್ ಮಿಷನ್‌ನ ಪ್ರೀಮಿಯರ್ ಇನ್ಫಿನಿಟಿ ಕೇಂದ್ರವನ್ನು ಉದ್ಘಾಟಿಸಲು ಮುಖ್ಯಮಂತ್ರಿಗಳು ದುಬೈಗೆ ಪ್ರಯಾಣ ಬೆಳೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...