20 ವರ್ಷಗಳಿಂದ ಸದಸ್ಯರಾಗಿದ್ದರೂ ಮುಡಾದಲ್ಲಿ ಏಕೆ ಅವ್ಯವಸ್ಥೆ: ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರುಗಳ ಜೊತೆ ನಡೆದ ಸಭೆಯಲ್ಲಿ ಪ್ರಶ್ನಿಸಿದರು.

ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಎಲ್ಲ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕಿಂಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ ಎಂದು ಮುಖ್ಯಮಂತ್ರಿಗಳು ಕೇಳಿದರು.

ಹೊಸ ಬಡಾವಣೆ ಮಾಡುವಾಗ ವಿದ್ಯುತ್‌ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ ಎಂದು‌ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

ಬಳಿಕ ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆ ಕೇಂದ್ರದ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ಕೇಂದ್ರದ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು ಅನುಷ್ಠಾನ ಕುರಿತು ಕೇಂದ್ರ ವಿಮಾನಯಾನ ಸಚಿವರನ್ನು ಜ.15 ರಂದು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಮೈಸೂರು ಜಿಲ್ಲಾಭಿವೃದ್ಧಿ ಕುರಿತಾದ ಸಭೆಯ ಇತರೆ ಮುಖ್ಯಾಂಶಗಳು

•ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ. ಯೋಜನೆಯಡಿ ಇನ್ನೂ 46 ಎಕರೆ ಭೂಸ್ವಾಧೀನ ಆಗಬೇಕಿದೆ. ಈಗಾಗಲೇ 111 ಎಕರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ. ಇನ್ನೂ 95 ಎಕರೆ ಪಾವತಿ ಆಗಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

•ಶಿಥಿಲಗೊಂಡಿರುವ ಲಾನ್ಸ್‌ಡೌನ್‌ ಕಟ್ಟಡವನ್ನು ತೆರವುಗೊಳಿಸಿ ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತಾದ ಎಲ್ಲ ಕಾನೂನು ತೊಡಕುಗಳನ್ನು ಬಗೆಹರಿಸಬೇಕು.

• ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.

• ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು ರೂ. 25 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮ. ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಸೂಚನೆ.

• ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ, ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ ರೂ.670 ಕೋಟಿ ಡಿಪಿಆರ್‌ ಸಿದ್ಧಪಡಿಸಲಾಗಿದ್ದು, ಅದನ್ನು ಸಂಪುಟದ ಮುಂದೆ ಮಂಡಿಸಲು ಸೂಚನೆ.

• ಅಂಬೇಡ್ಕರ್‌ ಭವನ ಕಾಮಗಾರಿಯನ್ನು ರೂ.23.83 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಲು ಸೂಚನೆ.

• ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ. ಇದೇ ರೀತಿ ಪಿರಿಯಾಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ.

• ಮೈಸೂರು ನಗರದಲ್ಲಿ 46 ಕಿಮೀ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ.

• ಐಟಿ ಪಾರ್ಕ್‌ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ. ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404 ಎಕರೆ ಜಮೀನು ಸ್ವಾಧೀನ ಕುರಿತಾಗಿ ಈಗಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

• ಫಿಲ್ಮ್‌ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು.

• ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ರೂ.13 ಕೋಟಿ ಯೋಜನೆ ಸಿದ್ಧಪಡಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...