ಸುಳ್ಳು ಆರೋಪಗಳ ವಸ್ತುಸ್ಥಿತಿಯನ್ನು ಜನರ ಮುಂದಿಡುತ್ತೇವೆ: ಸಿಎಂ ಸಿದ್ದರಾಮಯ್ಯ

Date:

ರಾಜ್ಯ ಕಾಂಗ್ರೆಸ್‌ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಎಂಬುದು ಊಹಾಪೋಹವಷ್ಟೇ. ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜೀನಾಮೆ ಬೇಡಿದರೆ, ರಾಜೀನಾಮೆ ಕೊಡಲು ಸಾಧ್ಯವಿಲ್ಲ. ಅವರು ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿ.ಟಿ ದೇವೇಗೌಡರು ತಮ್ಮ ಪರವಾಗಿ ಮಾತನಾಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದಾರೆ. ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ, ವಿರೋಧ ಪಕ್ಷದವರ ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ.ಟಿ ದೇವೇಗೌಡರು ಒಬ್ಬರು” ಎಂದಿದ್ದಾರೆ.

ಜಾತಿಗಣತಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, “ಜಾತಿಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದೆ. ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಆದೇಶವಾಗಿದೆ. ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಜಾತಿಗಣತಿ ಮತ್ತು ಒಳಮೀಸಲಾತಿ ಜಾರಿಯ ಬಗ್ಗೆ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತುಂಗಭದ್ರಾ ಜಲಾಶಯ ಹಾಗೂ ನವಲೆ ಜಲಾಶಯದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಪತ್ರಕರ್ತರ ಪ್ರಶ್ನೆಗೆ ಬಗ್ಗೆ ಉತ್ತರಿಸಿ, ಜಲಾಶಯದಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಪ್ರಸ್ತುತ 102 ಟಿಎಂಸಿ ನೀರು ಸಂಗ್ರಹವಿದೆ. ಸುಮಾರು 30 ಟಿಎಂಸಿ ನೀರಿಗೆ ಆಗುವಷ್ಟು ಹೂಳು ತುಂಬಿರುವುದರಿಂದ ಕೆಳಭಾಗದ ರೈತರಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. 19 ನೇ ಗೇಟ್ ದುರಸ್ತಿಯನ್ನು ಐದು ದಿನಗಳೊಳಗೆ ದುರಸ್ತಿ ಮಾಡಿ ಬಾಗಿನ ಅರ್ಪಿಸಲಾಗಿದೆ. ಸರ್ಕಾರ ಕೆಳಭಾಗದ ರೈತರಿಗೆ ನೀರು ಒದಗಿಸಲು ಅನುಕೂಲವಾಗುವಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...