ಶಾಂತಿ, ಸುವ್ಯವಸ್ಥೆ ನೆಲೆಗೊಳಿಸಲು ಕಾನೂನಿನ ಕೈಗಳಿಗೆ ಇನ್ನಷ್ಟು ಬಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ ಎಂದು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ, “ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಅದೇ ರೀತಿ ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ತಿ ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ. ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಮತ್ತು ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಎಲ್ಲ ಪ್ರಕರಣಗಳನ್ನು ಕೂಲಂಕಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಆಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹಳಿ ತಪ್ಪಿ, ಅರಾಜಕತೆ ತಾಂಡವವಾಡುತ್ತಿದೆ: ಬಿಜೆಪಿ ವಾಗ್ದಾಳಿ

“ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ, ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ” ಎಂದು ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...