ಸಚಿವ ಸಂಪುಟ ಸಭೆ | ಪತ್ರಿಕಾಗೋಷ್ಠಿಯಲ್ಲಿಯೂ ದೇವನಹಳ್ಳಿ ಭೂಸ್ವಾಧೀನ ವಿಚಾರ ಮಾತನಾಡದ ಸಿಎಂ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ(ಜುಲೈ 2) ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟ ಸಭೆ ನಡೆದಿದೆ. ಈ ಸಭೆಯಲ್ಲಿ ‘ದೇವನಹಳ್ಳಿ ಭೂಸ್ವಾಧೀನ’ ವಿಚಾರ ಪ್ರಸ್ತಾಪವಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಈ ವಿಚಾರದ ಪ್ರಸ್ತಾಪವೇ ಮಾಡಿಲ್ಲ. ಬಳಿಕ ಪತ್ರಿಕಾಗೋಷ್ಠಿಯಲ್ಲಾದರೂ ದೇವನಹಳ್ಳಿ ವಿಚಾರ ಎತ್ತಬಹುದು ಎಂಬ ನಿರೀಕ್ಷೆಯೂ ಹುಸಿಯಾಗಿದೆ.

ದೇವನಹಳ್ಳಿ ರೈತರ ಭೂಮಿ ಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಜುಲೈ 4ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನಾಡ ಉಳಿಸಿ ಸಮಾವೇಶ’ ನಡೆಯಲಿದೆ. ಈಗಾಗಲೇ ರೈತರ ಭೂಮಿಯನ್ನು ಸ್ವಾಧೀನ ಪಡೆಸಿಕೊಳ್ಳುವುದನ್ನು ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ‘ಭೂಮಿ ಸತ್ಯಾಗ್ರಹ’ ನಡೆಯುತ್ತಿದೆ. ಹೋರಾಟಗಾರರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ನಂದಿಬೆಟ್ಟದ ಸಂಪುಟ ಸಭೆಯಲ್ಲಿ ಚರ್ಚೆಗೆ ಬಾರದ ‘ದೇವನಹಳ್ಳಿ ಭೂಸ್ವಾಧೀನ’ ವಿಚಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವೆಲ್ಲವುದರ ನಡುವೆ ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಕೆಐಎಡಿಬಿ ಭೂಸ್ವಾಧೀನ ಕೈಬಿಡುವ ನಿರ್ಧಾರ ಪ್ರಕಟಿಸಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಈ ನಿರ್ಧಾರ ಪ್ರಕಟಿಸುವುದು ಬಿಟ್ಟು ಈ ವಿಚಾರವೇ ಪ್ರಸ್ತಾಪಿಸಿಲ್ಲ. ಅದಾದ ಬಳಿಕ ಪತ್ರಿಕಾಗೋಷ್ಠಿಯಲ್ಲಾದರೂ ಪ್ರಸ್ತಾಪಿಸಬಹುದು ಎಂಬ ರೈತರ ನಿರೀಕ್ಷೆ ಹುಸಿಯಾಗಿದೆ.

ಆದರೆ ಈ ಹಿಂದೆ ಸಿಎಂ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ ರೈತರು ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮುಖಂಡರ ಜೊತೆಗೆ ಜುಲೈ 4ರಂದು ಸಮಗ್ರ ಸಭೆ ನಡೆಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದ್ದಾರೆ.

ಸದ್ಯ ದೇವನಹಳ್ಳಿಯಲ್ಲಿ ರೈತರು ಉಪವಾಸ ಕುಳಿತ್ತಿದ್ದು, ಇನ್ನೊಂದೆಡೆ ಫ್ರೀಡಂ ಪಾರ್ಕಿನಲ್ಲಿ ಹೋರಾಟಗಾರರು, ಪ್ರಗತಿಪರ ಚಿಂತಕರು, ಚಿತ್ರನಟರು, ನಿರ್ದೇಶಕರು, ಸಾಹಿತಿಗಳು, ಬರಹಗಾರರು ಉಪವಾಸ ಕುಳಿತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...