ಶಾಲಾ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ‘ರಾಗಿ ಮಾಲ್ಟ್’ ವಿತರಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Date:

55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“2013ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. ಎಎಂಎಫ್‌ ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ ನೀಡುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಇದರಿಂದ ಎಎಂಎಫ್‌ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು” ಎಂದು ವಿವರಿಸಿದರು.

“ಈಗ ಅತ್ಯಂತ ಪೌಷ್ಟಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಟಿಕಾಂಶ ಕೊರತೆ ಆಗಲೇ ಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಢವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ” ಎಂದು ಹೇಳಿದರು.

“ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ” ಎಂದು ಬುದ್ದ, ಬಸವ, ಅಂಬೇಡ್ಕರ್ ಮಾತುಗಳನ್ನು ಉಲ್ಲೇಖಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರ ತುಷ್ಟೀಕರಣ, ಬಿಜೆಪಿ ಮತ್ತು ಗೋದಿ ಮೀಡಿಯಾ

“ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಹೆಚ್ಚಾಗಲು ಸಾಧ್ಯ. ಜ್ಞಾನದ ಬೆಳವಣಿಗೆ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ. ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್‌ಗಳೂ ಈಗ ಮೌಢ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಢ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಢ್ಯಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ” ಎಂದರು.

2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಟಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...