ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ(ಆಗಸ್ಟ್ 31) ಸಂಜೆ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಕುಮಾರಸ್ವಾಮಿ ಅವರು ಜ್ವರ, ನಿಶ್ಯಕ್ತಿ, ಆಯಾಸದಿಂದಾಗಿ ಜಯನಗರದ ಅಪೊಲೊ ಆಸ್ಪತ್ರೆಗೆ ಬುಧವಾರ (ಆ.30) ದಾಖಲಾಗಿದ್ದರು. ಸಿದ್ದರಾಮಯ್ಯ ಅವರೊಂದಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರೂ ಆಸ್ಪತ್ರೆಗೆ ತೆರಳಿ, ಕುಮಾರಸ್ವಾಮಿ ಅವರ ಯೋಗಕ್ಷೇಮ ವಿಚಾರಿಸಿದರು.
ಸದ್ಯ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಾಳೆ (ಸೆ.1) ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ ಎಂ ದು ವೈದ್ಯರು ತಿಳಿಸಿದ್ದಾರೆ.
‘ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಹಾರೈಸಿದ್ದರು.
ತಂದೆ ಆರೋಗ್ಯ ಸ್ಥಿರವಾಗಿದ್ದು, ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಕೆಲ ದಿನಗಳು ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದು, ಯಾರು ಆತಂಕಕ್ಕೆ ಒಳಗಾಗೋದು ಬೇಡ ಅಂತ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.





