ಕಸ್ತೂರಿ ರಂಗನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Date:

ಡಾ.ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಅದರಲ್ಲೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ ಕಸ್ತೂರಿ ರಂಗನ್ ರವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ದೇಶ ಕಂಡಂತ ಹೆಸರಾಂತ ವಿಜ್ಞಾನಿ. ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ದೀರ್ಘ ಕಾಲ ಇಸ್ರೋ ಅಧ್ಯಕ್ಷರಾಗಿ ದ್ದವರು. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಕೂಡ ಮಾಡುವ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ರಾಷ್ಟ್ರ ಮಟ್ಟದಲ್ಲಿ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಸರ ಕ್ಷೇತ್ರಕ್ಕೆ ಹಾಗೂ ಕರ್ನಾಟಕಕ್ಕೆ ಅವರ ಕೊಡುಗೆ ಅಪಾರವಾದುದು. ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅನಿವಾರ್ಯವಾದಾಗ ಮಾತ್ರ ಯುದ್ಧಮಾಡಬೇಕು

ಯುದ್ಧ ಬೇಡ ಎಂಬ ಮುಖ್ಯಮಂತ್ರಿಗಳ ಹೇಳಿಕೆಯ ಬಗ್ಗೆ ಚರ್ಚೆಗಳಾಗುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಯುದ್ಧ ಅನಿವಾರ್ಯವಾದಾಗ ಮಾತ್ರ ಮಾಡಬೇಕು. ಯುದ್ಧದಿಂದ ಪರಿಹಾರವಾಗಲು ಸಾಧ್ಯವಿಲ್ಲ. ಅನಿವಾರ್ಯವಾದಾಗ ಮಾತ್ರ ಮಾಡಬೇಕು. ಕೇಂದ್ರ ಸರ್ಕಾರದ ಭದ್ರತಾ ವ್ಯವಸ್ಥೆಯ ವೈಫಲ್ಯ ಇದೆ ಎಂದು ಹೇಳಿದ್ದೇನೆ. 28 ಜನ ಪ್ರವಾಸಿಗರು ಉಗ್ರರ ದಾಳಿಯಲ್ಲಿ ಅಸುನೀಗಿದ್ದಾರೆ. ಹಿಂದೆ ಪುಲ್ವಾಮಾ ದಾಳಿಯಲ್ಲಿ 40 ಸೈನಿಕರು ಮೃತಪಟ್ಟಿದ್ದರು. ಕೇಂದ್ರ ಸರ್ಕಾರ ಭದ್ರತೆಯನ್ನು ಸರಿಯಾದ ರೀತಿಯಲ್ಲಿ ಕೊಟ್ಟಿರಲಿಲ್ಲ. ತಕ್ಷಣಕ್ಕೆ ಯುದ್ಧ ಬೇಡ. ಆದರೆ ಯುದ್ಧ ಮಾಡಲೇಬಾರದು ಎಂದೇನಿಲ್ಲ” ಎಂದರು.

ಸಿದ್ದರಾಮಯ್ಯ ಅವರು ಓಲೈಕೆ ರಾಜಕಾರಣ ಮಾಡುತ್ತಾರೆ ಎಂಬ ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ ಸಿಎಂ ಬಿಜೆಪಿ ಹೇಳುವುದೆಲ್ಲ ಸರಿಯಲ್ಲ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...