ಶ್ರೀಮಂತರ ರೂ. 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಯಾರ ಪರ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ ರೂ.16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಚಿತ್ರದುರ್ಗದಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ, ಬೃಹತ್ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಅವರು, “ಮೋದಿ ಹತ್ತತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ” ಎಂದರು.

“ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಅಂದರು. ನನ್ನ ಕೈಗೆ ಅಧಿಕಾರ ಕೊಡಿ ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ ರೂ.15 ಲಕ್ಷ ಹಾಕ್ತೀವಿ ಅಂದ್ರು. ಹತ್ತು ವರ್ಷದಲ್ಲಿ ಹದಿನೈದು ಪೈಸೆಯನ್ನೂ ಹಾಕಲಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಬಂದ ಮೇಲೆ ಜನ ಸಾಮಾನ್ಯರ, ಮಧ್ಯಮ ವರ್ಗದವರ ಮೇಲೆ ತೆರಿಗೆ ಭಾರ ಹೆಚ್ಚಾಯಿತು. ಉದ್ಯಮಿಗಳ ತೆರಿಗೆ ಭಾರ ಕಡಿಮೆ ಆಯಿತು. ಆದ್ದರಿಂದ ಮೋದಿ ಜನದ್ರೋಹಿ ತಾನೆ? ಹೀಗೆ ಮೋದಿಯವರ ವೈಫಲ್ಯಗಳನ್ನು ಪಟ್ಟಿ ಮಾಡುತ್ತಾ ಹೋದರೆ ಹನುಮಂತನ ಬಾಲದಂತೆ ಬೆಳೆಯುತ್ತದೆ” ಎಂದರು.

ಕಾಡುಗೊಲ್ಲ ಸಮುದಾಯ ಎಸ್‌ಟಿಗೆ ಸೇರಿಸುವ ಭರವಸೆ

“ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ?” ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

“ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಬೇಕು ಎನ್ನುವ ಬೇಡಿಕೆಗೆ ನಾವು ಸಂಪೂರ್ಣವಾಗಿ ಸ್ಪಂದಿಸಿದ್ದೇವೆ. ಈ ಬಗ್ಗೆ ಕೇಂದ್ರಕ್ಕೂ ಶಿಫಾರಸ್ಸು ಮಾಡಿದ್ದಾಗಿದೆ. ಆದರೆ ಈ ವರೆಗೂ ಇದಕ್ಕೆ ಏಕೆ ಸ್ಪಂದಿಸುತ್ತಿಲ್ಲ” ಎಂದು ಸಿಎಂ ಕೇಳಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿಗೆ ಸೇರಿಸುತ್ತೇವೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಆಗ್ರಹಕ್ಕೆ ಧ್ವನಿಗೂಡಿಸಿ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರು, ತಮ್ಮ ಭಾಷಣದಲ್ಲೂ ಇದೇ ಮಾತನ್ನು ಪುನರುಚ್ಛರಿಸಿ, “ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿಗೆ ಸೇರಿಸುತ್ತೇವೆ” ಎಂದು ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...