ಯೂಟ್ಯೂಬ್‌ನಲ್ಲಿ ಗ್ಯಾರಂಟಿ ಯೋಜನೆಗಳ ವಿಡಿಯೋ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

Date:

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಜನರಿಗೆ ನೀಡಲಾಗಿದ್ದ ಗ್ಯಾರಂಟಿ ಯೋಜನೆಗಳ ಕುರಿತ ವಿಡಿಯೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯೂಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ದಿನವೇ ಈ ವಿಡಿಯೋ ಬಿಡುಗಡೆಗೊಳಿಸಲಾಗಿದ್ದು, ‘ಗ್ಯಾರಂಟಿ ಯೋಜನೆಗಳ ಮೂಲಕ ನಾವು ನಾಡಿನ ಪ್ರತಿಯೊಬ್ಬ ಪ್ರಜೆಗೂ ಘನತೆಯ ಬದುಕಿನ ಸ್ವಾತಂತ್ರ್ಯವನ್ನು ಖಾತ್ರಿಪಡಿಸಿದ್ದೇವೆ. ಬನ್ನಿ, ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಗ್ಯಾರಂಟಿ ಯೋಜನೆಗಳೊಂದಿಗೆ ಸಂಭ್ರಮಿಸೋಣ. ದೇಶವಾಸಿಗಳಿಗೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಕಾಮನೆಗಳು’ ಎಂದು ವಿವರದಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಐದು ಗ್ಯಾರಂಟಿಗಳನ್ನು ಉಲ್ಲೇಖಿಸಲಾಗಿದ್ದು, ‘ಅನ್ನಭಾಗ್ಯ’ ಯೋಜನೆಯು ‘ಹಸಿವಿನಿಂದ ಸ್ವಾತಂತ್ರ್ಯ’, ‘ಶಕ್ತಿ’ ಯೋಜನೆಯಿಂದಾಗಿ ಸ್ತ್ರೀಯರಿಗೆ ‘ಪರಾವಲಂಬನೆಯಿಂದ ಸ್ವಾತಂತ್ರ್ಯ’, ‘ಗೃಹಜ್ಯೋತಿ’ ಯೋಜನೆಯು ‘ಅಂಧಕಾರದಿಂದ ಸ್ವಾತಂತ್ರ್ಯ’ ನೀಡಿದೆ. ಮುಂದಿನ ದಿನಗಳಲ್ಲಿ ‘ಗೃಹ ಲಕ್ಷ್ಮೀ’ ಯೋಜನೆಯ ಮುಖಾಂತರ ‘ಬೆಲೆ ಏರಿಕೆಯಿಂದ’ ಹಾಗೂ ‘ಯುವನಿಧಿ’ಯ ಮೂಲಕ ‘ನಿರುದ್ಯೋಗದಿಂದ ಸ್ವಾತಂತ್ರ್ಯ’ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...