ಯತೀಂದ್ರ ಸಂಭಾಷಣೆಯ ಬಗ್ಗೆ ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಬಿಡುಗಡೆಗೊಳಿಸಿದ ಸಿದ್ದರಾಮಯ್ಯ

Date:

ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿರುವ ವಿಡಿಯೋ ದಾಖಲೆ ಇಟ್ಟುಕೊಂಡು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮಾಡಿರುವ ‘ಹಣಕ್ಕಾಗಿ ವರ್ಗಾವಣೆ ದಂಧೆ’ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ್ದ ಬಳಿಕ ಸಿಎಂ ಸಿದ್ದರಾಮಯ್ಯ, ಯತೀಂದ್ರ ಸಂಭಾಷಣೆಯ ದಾಖಲೆಯನ್ನು ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಬಿಡುಗಡೆಗೊಳಿಸಿದ್ದಾರೆ.

ತಮ್ಮ ಪುತ್ರ ಯತೀಂದ್ರ ಮಾತನಾಡಿದ್ದು ಶಾಲಾ ಕಟ್ಟಡಗಳನ್ನು ಸಿಎಸ್ಆರ್ ನಿಧಿಯಿಂದ ನಿರ್ಮಿಸಲಾಗುತ್ತಿರುವ ವಿಚಾರದ ಬಗ್ಗೆ ಎಂಬುದನ್ನು ಸ್ಪಷ್ಟಪಡಿಸಿದ ಬಳಿಕ ದಾಖಲೆಯನ್ನೂ ಕೂಡ ಬಿಡುಗಡೆಗೊಳಿಸಿದ್ದಲ್ಲದೇ, ಸುದೀರ್ಘವಾದ ಪೋಸ್ಟ್‌ ಅನ್ನು ಕೂಡ ಹಂಚಿಕೊಂಡು, ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ, ‘ತಾ ಕಳ್ಳ, ಪರರ ನಂಬ’ ಎಂಬ ಗಾದೆ ಮಾತನ್ನು ಒಬ್ಬ ಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಎಚ್.ಡಿ.ಕುಮಾರಸ್ವಾಮಿಯವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಫೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಾಗಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು. ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ’ ಎಂದು ದಾಖಲೆಯನ್ನು ಬಿಡುಗಡೆಗೊಳಿಸಿದ್ದಾರೆ.

‘ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ. ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರ ಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮಾಡಿರುವ ‘ಹಣಕ್ಕಾಗಿ ವರ್ಗಾವಣೆ ದಂಧೆ’ ಆರೋಪಕ್ಕೆ ಖಡಕ್ ಆಗಿ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.

ಈ ನಡುವೆ ಕಾಂಗ್ರೆಸ್ ಕೂಡ ಟ್ವೀಟ್ ಮಾಡಿದ್ದು, ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದೆಂದರೆ ನೀರು ಕುಡಿದಷ್ಟೇ ಸಲೀಸು ಎಂದು ಕಾಲೆಳೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...