ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ಸ್ಥಗಿತವಾಗುವುದಿಲ್ಲ, ಅಪಪ್ರಚಾರ ನಂಬಬೇಡಿ: ಸಿಎಂ ಸಿದ್ದರಾಮಯ್ಯ

Date:

“ತಳಮಟ್ಟದ ಜನರಿಗೆ ಉಪಯೋಗವಾಗುವ ಗ್ಯಾರಂಟಿ ಯೋಜನೆಗಳನ್ನು ಕೆಲವರು ಟೀಕಿಸಿದರು. ಆದರೆ ರಾಜ್ಯದ 150 ಕೋಟಿ ಮಹಿಳೆಯರು ಜೂನ್ 11 ರಿಂದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇಂತಹ ಜನಪರ ಯೋಜನೆಗಳ ಬಗ್ಗೆ ಇಚ್ಛಾಶಕ್ತಿ ತೋರದ ಪಕ್ಷಗಳು, ಮೊದಲಿಗೆ ಯೋಜನೆಗಳನ್ನು ಜಾರಿ ಮಾಡಿ ನಂತರ ಸ್ಥಗಿತಗೊಳಿಸುತ್ತಾರೆ ಎಂದು ಟೀಕಿಸುತ್ತಾರೆ. ಆದರೆ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ರಾಜ್ಯದ 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆಯಲ್ಲಿ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ರಾಷ್ಟ್ರೀಯ ಭಗೀರಥ ಮಹೋತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

“ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ. ಚಲನರಹಿತವಾದ ಜಾತಿ ವ್ಯವಸ್ಥೆ ಬಲವಾಗಿ ಬೇರು ಬಿಟ್ಟಿರುವುದರಿಂದ ಬದಲಾವಣೆ ತರಲು ಇಂದಿಗೂ ಸಾಧ್ಯವಾಗಿಲ್ಲ. ದಾರ್ಶನಿಕರ ಪ್ರಯತ್ನದಿಂದಾಗಿ ಸ್ವಲ್ಪ ಸರಿಹೋಗುವ ಜಾತಿ ವ್ಯವಸ್ಥೆ ಮತ್ತೆ ಯಥಾಸ್ಥಿತಿಗೆ ಮರಳುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉಪ್ಪು ತಯಾರಿಸಿ ಮಾರಾಟ ಮಾಡುವ ವೃತ್ತಿಯಾಗಿದ್ದು, ಕೈಗಾರೀಕರಣವಾದ ನಂತರ ಅವರ ವೃತ್ತಿ ಬಿಡಬೇಕಾದ ಪರಿಸ್ಥಿತಿ ಉಂಟಾಗಿದೆ. ಇವರ ಕಸುಬಿಗೆ ಧಕ್ಕೆಯುಂಟಾದ ಮೇಲೆ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಶಿಕ್ಷಣ, ಆರ್ಥಿಕ ಶಕ್ತಿಯಿಂದ ವಂಚಿತರಾಗಿ ಉದ್ಯೋಗವಿಲ್ಲದೇ ಕೂಲಿ ಮಾಡುವ ಸ್ಥಿತಿ ಉಂಟಾಯಿತು. ಆದರೆ ಉಪ್ಪಾರ ಸಮಾಜ ಮಹಾತ್ಮ ಗಾಂಧೀಜಿಯವರು ಬ್ರಿಟಿಷರ ವಿರುದ್ಧ ಹೋರಾಡುವಾಗ ಉಪ್ಪಿನ ಸತ್ಯಾಗ್ರಹ ಮಾಡಿದರು. ಅದರಲ್ಲಿ ಉಪ್ಪಾರರ ಕೊಡುಗೆಯೂ ಅಪಾರವಾಗಿತ್ತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಆಯೋಗಕ್ಕೆ ಅಧ್ಯಕ್ಷರಿಲ್ಲ; ಶೋಷಿತ ಹೆಣ್ಣುಮಕ್ಕಳ ನೋವು ಕೇಳುವವರಿಲ್ಲ

ಶ್ರೇಷ್ಠತೆ ಜಾತಿಯಿಂದಲ್ಲ, ಶಿಕ್ಷಣದಿಂದ ಬರುತ್ತದೆ

“ಸಮುದಾಯಗಳು ಸೂಕ್ತರೀತಿಯಲ್ಲಿ ಅಭಿವೃದ್ದಿಹೊಂದಬಾರದೆಂಬ ಉದ್ದೇಶದಿಂದ ದಾರಿ ತಪ್ಪುಸುವವರು ಬಹಳಷ್ಟಿದ್ದಾರೆ. ಚರಿತ್ರೆ ತಿಳಿದಿರುವವರು ಮಾತ್ರ ಭವಿಷ್ಯ ನಿರ್ಮಿಸಲು ಸಾಧ್ಯ. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಶಕ್ತಿ ತುಂಬಿದಾಗ ಮಾತ್ರ ದೇಶಕ್ಕೆ ಬಂದ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಶ್ರೇಷ್ಠತೆ ಎಂಬುದು ಜಾತಿಯಿಂದ ಬರುವುದಲ್ಲ. ಅದು ನಮ್ಮ ಶಿಕ್ಷಣ, ಪರಿಶ್ರಮದಿಂದ ಬರುತ್ತದೆ” ಎಂದರು.

ಉಪ್ಪಾರ ಸಮಾಜಕ್ಕೆ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಬಹಳಷ್ಟು ಕೆಲಸಗಳನ್ನು ಮಾಡಿದ್ದು, ಸರ್ಕಾರದ ವತಿಯಿಂದ ಭಗೀರಥ ಜಯಂತಿ ಆಚರಣೆ ಹಾಗೂ ಭಗೀರಥ ಮಂಡಳಿ ಸ್ಥಾಪನೆಯಾಗಿದ್ದರೆ ಅದಕ್ಕೆ ಸ್ವಾಮೀಜಿಯವರು ಕಾರಣ. ಸಂಸ್ಥೆಗೆ ಸ್ವಾಮೀಜಿಗಳ ಜಮೀನು ಕೊಡಬೇಕೆಂಬ ಮನವಿಗೆ ಸ್ಪಂದಿಸಿ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಭರವಸೆ ನೀಡಿದರು.

ಪುರುಷೋತ್ತಮಾನಂದಪುರಿ ಮಹಾಸ್ವಾಮಿ, ಅಧ್ಯಕ್ಷತೆ ವಹಿಸಿದ್ದರು. ಸಚಿವ ಕೆ ಹೆಚ್ ಮುನಿಯಪ್ಪ , ಸತೀಶ್ ಜಾರಕಿಹೊಳಿ, ಉಸ್ತುವಾರಿ ಸಚಿವ ಡಾ ಕೆ. ಸುಧಾಕರ್, ಶಾಸಕರಾದ ಗೋವಿಂದಪ್ಪ, ಶ್ರೀನಿವಾಸ್, ಪುಟ್ಟಸ್ವಾಮಿ ಗೌಡ, ಮಾಜಿ ಸಂಸದ ಚಂದ್ರಪ್ಪ, ಉಪ್ಪಾರ ಸಮಾಜದ ಮುಖಂಡರು, ಸಾಲುಮರದ ತಿಮ್ಮಕ್ಕ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...