ಬಿಜೆಪಿ-ಜೆಡಿಎಸ್ ಹೊಂದಾಣಿಕೆ ‘ಅನ್ನ ಹಳಸಿತ್ತು-ನಾಯಿ ಹಸಿದಿತ್ತು’ ಎನ್ನುವಂತಾಗಿದೆ: ಸಿಎಂ ಸಿದ್ದರಾಮಯ್ಯ 

Date:

ಬಿಜೆಪಿ-ಜೆಡಿಎಸ್ ಮೈತ್ರಿ ಹೊಂದಾಣಿಕೆಯು ಅನ್ನ ಹಳಸಿತ್ತು-ನಾಯಿ ಹಸಿದಿತ್ತು ಎನ್ನುವಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪಿರಿಯಾಪಟ್ಟಣದಲ್ಲಿ ನಡೆದ ಜನಧ್ವನಿ-2 ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಸೆಕ್ಯುಲರ್ ಹೆಸರಿಟ್ಟುಕೊಂಡು ಬಿಜೆಪಿ ಜತೆ ಬೆರೆತಿರುವ ಜೆಡಿಎಸ್‌ಗೆ ಮಾನ ಮರ್ಯಾದೆ ಇದೆಯಾ? ಕೇವಲ ಕುಟುಂಬದ ಹಿತಾಸಕ್ತಿಗಾಗಿ ಯಾರ ಜತೆಗೆ ಬೇಕಾದರೂ ಹೋಗಲು ಜೆಡಿಎಸ್ ರೆಡಿಯಾಗಿ ಬಿಡುತ್ತದೆ. ಯಾವುದೇ ಸಿದ್ದಾಂತ ಇಲ್ಲ, ಜನಪರವಾದ ಬದ್ಧತೆ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ಮೋದಿಯವರೇ ಒಂದಲ್ಲಾ ಎರಡಲ್ಲಾ ಹತ್ತತ್ತು ವರ್ಷ ಪ್ರಧಾನಿ ಆಗಿದ್ರೂ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ಲ. ಇದು ನ್ಯಾಯನಾ ಸ್ವಾಮಿ? ನಿಮ್ಮನ್ನು ನಂಬಿದವರಿಗೆ ದ್ರೋಹ ಬಗೆದದ್ದು ಸರೀನಾ ಸ್ವಾಮಿ” ಎಂದು ತಮ್ಮದೇ ಶೈಲಿಯಲ್ಲಿ ಸಿದ್ದರಾಮಯ್ಯ ಪ್ರಶ್ನಿಸಿದರು.

“ನೀವು ಕೊಟ್ಟ ಮಾತನ್ನಂತೂ ಉಳಿಸಿಕೊಳ್ಳಲಿಲ್ಲ.  ಈ ದೇಶದ ರೈತರು, ಕಾರ್ಮಿಕರು, ಮಹಿಳೆಯರು, ಶ್ರಮಿಕರು, ಸಣ್ಣ-ಮಧ್ಯಮ ಉದ್ಯಮಿಗಳಿಗೆ, ಯುವ ಜನರ ಭವಿಷ್ಯಕ್ಕೆ ಒಂದೇ ಒಂದು, ಬರೀ ಒಂದೇ ಒಂದು ಕಾರ್ಯಕ್ರಮವನ್ನೂ ಸಮರ್ಪಕವಾಗಿ ಜಾರಿ ಮಾಡಲಿಲ್ಲ. ಚಂದಕ್ಕೆ ಹತ್ತತ್ತು ವರ್ಷ ಪ್ರಧಾನಿಯಾಗಬೇಕಿತ್ತಾ ಮೋದಿಯವರೇ? ಪ್ರಧಾನಿಯಾಗಿ ಸುಳ್ಳು ಹೇಳ್ಕಂಡು ತಿರುಗಿದ್ರೆ ಭಾರತೀಯರಿಗೆ ನಂಬಿಸಿ ಮೋಸ ಮಾಡಿದಂಗಲ್ವಾ ಸ್ವಾಮಿ ಎಂದು ಸಿಎಂ ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಕೆ.ವೆಂಕಟೇಶ್, ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...