ಮೇಕೆದಾಟು | ನಮಗೆ ಬೇಕಿರುವುದು ಸ್ಟಾಲಿನ್ ಅನುಮತಿ ಅಲ್ಲ, ಕೇಂದ್ರದ್ದು: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

Date:

‘ಮೇಕೆದಾಟು ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ’ ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಉಲ್ಲೇಖಿಸಿ ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿಬಿದ್ದಿದ್ದ ಬಿಜೆಪಿಗೆ ಉತ್ತರ ನೀಡಿರುವ ಸಿಎಂ ಸಿದ್ದರಾಮಯ್ಯ, “ಮೇಕೆದಾಟು ಯೋಜನೆಯ ಬಗ್ಗೆ ನಮಗೆ ಬೇಕಿರುವುದು ಸ್ಟಾಲಿನ್ ಅನುಮತಿ ಅಲ್ಲ, ಕೇಂದ್ರ ಸರ್ಕಾರದ್ದು” ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿರುವ ಸಿಎಂ ಸಿದ್ದರಾಮಯ್ಯ, “ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದಾಗ ನಮ್ಮ ಮೇಲೆ ಮೊಕದ್ದಮೆ ದಾಖಲಿಸಿದವರು ನೀವು. ಕಾವೇರಿ ನೀರು ಹಂಚಿಕೆಯಲ್ಲಿ ನಾಡಿಗೆ ಅನ್ಯಾಯ ಆಗುತ್ತಿದ್ದಾಗ ಹಲವು ಬಾರಿ ಮನವಿ ಮಾಡಿದರೂ ಮಧ್ಯಪ್ರವೇಶಿಸದೆ ಕನ್ನಡಿಗರನ್ನು ಸಂಕಷ್ಟಕ್ಕೆ ತಳ್ಳಿದವರು ನಿಮ್ಮದೇ ಪ್ರಧಾನಿಗಳು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮದೇ ಪಕ್ಷದ ರಾಜ್ಯಾಧ್ಯಕ್ಷ ತಮಿಳುನಾಡಿನಲ್ಲಿ ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಾರೆ. ಮೇಕೆದಾಟು ಯೋಜನೆ ವಿರುದ್ಧ ಉಪವಾಸ ಸತ್ಯಾಗ್ರಹ ಕೂರುತ್ತಾರೆ. ಮೇಕೆದಾಟು ಯೋಜನೆಯ ಜಾರಿಗೆ ನಾವು ಎಂ.ಕೆ ಸ್ಟಾಲಿನ್‌ ಅವರ ಅನುಮತಿಗಾಗಿ ಕಾದು ಕುಳಿತಿಲ್ಲ, ನಮಗೆ ಅನುಮತಿ ಬೇಕಿರುವುದು ಕೇಂದ್ರ ಸರ್ಕಾರದ್ದು. ನಿಮ್ಮದೇ ಪಕ್ಷದ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ನಾಳೆಯಿಂದಲೇ ಅಣೆಕಟ್ಟು ಕೆಲಸ ಆರಂಭ ಮಾಡಲು ನಾವು ತಯಾರಿದ್ದೇವೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂಬ ಸುಳ್ಳು ಸುದ್ದಿಯ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುವುದನ್ನು ನಿಲ್ಲಿಸಿ” ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

“ನನ್ನ ಭಾವಚಿತ್ರಕ್ಕೆ ಹಳದಿ ಬಣ್ಣದ ಜೆರ್ಸಿ ಹಾಕಿ ನನ್ನ ಬದ್ಧತೆಯನ್ನು ಅವಮಾನಿಸಬೇಡಿ. ನಾನು ಬದುಕಿರುವವರೆಗೆ ಕನ್ನಡಿಗನೆ, ಆರ್‌ಸಿಬಿಯ ಹೆಮ್ಮೆಯ ಅಭಿಮಾನಿಯೇ” ಎಂದು ಹೇಳುವ ಸಿಎಂ ಸಿದ್ದರಾಮಯ್ಯ, ಬಿಜೆಪಿಗರನ್ನು ಜಾಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...